ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

19adarshkdga5
Published on

ಮಡಿಕೇರಿ: ಮಡಿಕೇರಿ ತಾಲೂಕು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯರವರು ಗುರುವಾರ ಅನಾವರಣಗೊಳಿಸಿದರು.


ನಗರದ ಶಾಸಕರ ಕಚೇರಿಯಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಸಭಾಂಗಣದಲ್ಲಿ ಜ.೨೮ ರಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.


ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲ್ಲೂಕು ಗೌರವ ಕಾರ್ಯದರ್ಶಿ ಕಡ್ಲೆರ ತುಳಸಿ ಮೋಹನ್, ನಿರ್ದೇಶಕಿ ಪ್ರೇಮ ರಾಘವಯ್ಯ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net