ಅಥ್ಲೆಟಿಕ್‌ನಲ್ಲಿ ಮಡಿಕೇರಿಯ ಬಿ.ವಸಂತಿ ಸಾಧನೆ

VASANTHI
Published on

ಮಡಿಕೇರಿ: ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ನಡೆದ ೪೨ನೇ ರಾಷ್ಟ್ರೀಯ ವೆಟರನ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆಯ ಶುಶ್ರೂಕ ಅಧಿಕಾರಿ ಬಿ.ವಸಂತಿರವರು ಎರಡು ಪದಕಗಳನ್ನು ಗೆದ್ದಿದ್ದಾರೆ.


ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ೪೦೦ ಮೀ ಓಟದಲ್ಲಿ ಬೆಳ್ಳಿ ಪದಕ ಮತ್ತು ೧೦೦ ಮೀ ನಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡು ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮೈಸೂರಿನ ಚಾಮುಂಡೇಶ್ವರಿ ಸ್ಟೇಡಿಯಂನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ೧೦೦ ಮೀ ಓಟದಲ್ಲಿ ಬೆಳ್ಳಿ ಪದಕ ಗೆದ್ದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.


ಬಿ.ವಸಂತಿರವರು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶುಶ್ರೂಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ಮೈಸೂರು ಕೆ.ಆರ್.ಆಸ್ಪತ್ರೆಯಲ್ಲಿ ಹಿರಿಯ ಶುಶ್ರೂಕ ಅಧಿಕಾರಿಯಾಗಿ ಬಡ್ತಿ ಹೊಂದಿದ್ದಾರೆ. ಇವರು ಅನೇಕ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕೊಡಗು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net