ಶ್ರೀಗರು ವೀರಘಂಟೈ ಮಡಿವಾಳೇಶ್ವರ ಜಾತ್ರೆ ರದ್ದು

KLK 21-1
Published on

ಕಲಕೇರಿ: ಗ್ರಾಮದಲ್ಲಿ ಡಿ.29 ರಿಂದ ಜ.2ರ ವರೆಗೆ ನಡೆಯಬೇಕಿದ್ದ ಪಂಚರಂಗ ಸಂಸ್ಥಾನ ಗದ್ದುಗೆಮಠದ ಶ್ರೀಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಕೋವಿಡ್-19ರ ಹಿನ್ನೆಲೆ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸರ್ಕಾರದ ಮಾರ್ಗಸೂಚಿಯನ್ವಯ ಜಾತ್ರಾ ಮಹೋತ್ಸವದ ಎಲ್ಲ ಕಾರ್ಯಕ್ರಮ ಹಾಗೂ ರಥೋತ್ಸವ ರದ್ದುಪಡಿಸಲಾಗಿದೆ. ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳನ್ನು ಮಾತ್ರ ನಡೆಸಲಾಗುವುದು. ಪರಸ್ಥಳದ ಭಕ್ತರು ತಮ್ಮ ಮನೆಗಳಲ್ಲಿಯೇ ಕುಳಿತು ಮಡಿವಾಳೇಶ್ವರರ ಧ್ಯಾನ ಮಾಡಬೇಕೆಂದು ಗದ್ದಿಗೇಮಠದ ಪೀಠಾಧಿಪತಿ ಶ್ರೀಗುರು ಮಡಿವಾಳೇಶ್ವರ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net