ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ಅರ್ಜಿ ಅಹ್ವಾನ

madivala
Published on

ಮಂಗಳೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಹಾಗೂ ಗಂಗಾಕಲ್ಯಾಣ ಯೋಜನೆ.(ಈ ಯೋಜನೆಯಲ್ಲಿ ಜಿಲ್ಲೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು) ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ). ಅರ್ಹ ಅಭ್ಯರ್ಥಿಗಳು ಮಂಗಳೂರು ಒನ್, ಕರ್ನಾಟಕ ಒನ್, ಅಟಲ್‌ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನವೆಂಬರ್ 3ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್: www.kmmd.karnataka.gov.in ಅಥವಾ ದೂರವಾಣಿ ಸಂಖ್ಯೆ: 0824-2456544, 9148013035 ಅಥವಾ 8618146685 ಅನ್ನು ಸಂಪರ್ಕಿಸುವಂತೆ ಕೆಎಂಎಂಡಿಸಿ ಜಿಲ್ಲಾ ವ್ಯವಸ್ಥಾಪಕ ಪವನ್ ಕುಮಾರ್ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net