

ಹಾಸನ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಫೆ.1ರ ಶನಿವಾರ ಬೆಳಗ್ಗೆ 11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ.
ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಗೌರವ ಉಪಸ್ಥಿತಿ ವಹಿಸಲಿದ್ದಾರೆ, ಶಾಸಕ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಶ್ರೇಯಸ್ ಎಂ.ಪಟೇಲ್, ಶಾಸಕರಾದ ಎಚ್.ಡಿ.ರೇವಣ್ಣ, ಡಾ. ಸಿ.ಎನ್.ಬಾಲಕೃಷ್ಣ, ಎ.ಮಂಜು, ಎಚ್.ಕೆ.ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಡಾ. ಸೂರಜ್ ರೇವಣ್ಣ ಹಾಗೂ ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ ಭಾಗವಹಿಸಲಿದ್ದಾರೆ. ನಿವೃತ್ತ ಉಪನ್ಯಾಸಕರಾದ ಗೊರೂರು ಶಿವೇಶ್ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆ ಮೂಲಕ ತಿಳಿಸಿದೆ.