ಸಮುದಾಯಕ್ಕಿದೆ ಸೋಲಿಸುವ ಶಕ್ತಿ

02 CHN
Published on

ಚನ್ನಗಿರಿ: ರಾಜಕೀಯ ನಾಯಕರು ಮಡಿವಾಳ ಸಮಾಜವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಒಬ್ಬರನ್ನು ಗೆಲ್ಲಿಸುವ ಶಕ್ತಿ ಇಲ್ಲದೆ ಹೋದರೂ ಸೋಲಿಸುವ ಶಕ್ತಿ ನಮ್ಮ ಸಮುದಾಯಕ್ಕಿದೆ ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಗುಡ್ಡಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವರ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಮಡಿವಾಳ ಸಮಾಜ ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದ ಸಣ್ಣ ಸಮಾಜ. ಕಳೆದ 10 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಸಭೆ ಸಮಾರಂಭ ಮಾಡಲು ಸಮುದಾಯ ಭವನದ ಅವಶ್ಯಕತೆಯಿದೆ ಎಂದು ಮನವಿ ಸಲ್ಲಿಸುತ್ತಿದ್ದರೂ ಪ್ರಯೋಜನವಾಗಿಲ್ಲ. ಪರಿಶಿಷ್ಟ ಜಾತಿ ಮೀಸಲಾತಿ ನೀಡಿ ಎಂದು ನಿರಂತರ ಹೋರಾಟ ನಡೆಸುತ್ತಾ ಬಂದರೂ ಯಾವುದೇ ಉತ್ತರ ಸಿಕ್ಕಿಲ್ಲ. ಇದೇ ರೀತಿ ನಮ್ಮ ಸಮಾಜವನ್ನು ತಾತ್ಸಾರ ಮಾಡಿದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಮಾತನಾಡಿ, ಚನ್ನಗಿರಿ ಪಟ್ಟಣ ಸೇರಿ ತಾಲೂಕಿನಾದ್ಯಂತ ಲಭ್ಯತೆ ಇರುವ ಸರ್ಕಾರದ ಜಮೀನನ್ನು ಗುರುತಿಸಿ ಮಡಿವಾಳ ಸಮಾಜಕ್ಕೆ ನೀಡಲಾಗುವುದು. ಕೂಡಲೇ ತಹಸೀಲ್ದಾರ್ ಕಚೇರಿಗೆ ಮತ್ತು ಪುರಸಭೆಗೆ ನಿವೇಶನ ಕೋರಿ ಅರ್ಜಿ ಸಲ್ಲಿಸಿ ಎಂದರು.

ಮಡಿವಾಳ ಸಮಾಜದ ಗೌರವ ಅಧ್ಯಕ್ಷ ದತ್ತಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಪುಟ್ಟಲಕ್ಷ್ಮಮ್ಮ, ನಗರ ಘಟಕದ ಅಧ್ಯಕ್ಷ ಜಯಣ್ಣ, ರಮೇಶ್, ಮೂರ್ತಿ, ದೇವರಾಜ್, ರಂಗನಾಥ್, ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಆಥರ್ಗ, ಸಮಾಜ ಕಲ್ಯಾಣಾಧಿಕಾರಿ ಡಾ. ಮಲ್ಲಿಕಾರ್ಜುನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net