160 ಕಾರ್ಮಿಕರಿಗೆ ಆರೋಗ್ಯ ತಪಾಸಣೆ

14M.D.R.1
Published on

ಮದ್ದೂರು: ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಬಿದರಹೊಸಹಳ್ಳಿ ಗ್ರಾಪಂ ವತಿಯಿಂದ ನಡೆದ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ತಾಲೂಕು ಪಂಚಾಯಿತಿ ಇಒ ಮುನಿರಾಜು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೂಲಿಕಾರ್ಮಿಕರು ಮಾಸ್ಕ್ ಧರಿಸಿಕೊಳ್ಳುವ ಜತೆಗೆ ಪರಸ್ಪರ ಅಂತರ ಕಾಯ್ದುಕೊಳ್ಳುವ ಮೂಲಕ ಕರೊನಾ ವೈರಸ್ ತಡೆಗಟ್ಟಲು ಸರ್ಕಾರದ ಜತೆ ಕೈಜೋಡಿಸಬೇಕು. ಒಂದು ವೇಳೆ ವೈರಸ್ ಸೋಂಕು ತಗುಲಿದಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ 160 ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಈಗಾಗಲೇ ಕೆ.ಹೊನ್ನಲಗೆರೆ, ಸಿಎ ಕೆರೆ, ಅಡಗನಹಳ್ಳಿ ಇತರ ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿರುವುದಾಗಿ ತಾಪಂ ಇಒ ಹೇಳಿದರು.

ಗ್ರಾಪಂ ಉಪಾಧ್ಯಕ್ಷ ನಾಗೇಶ್, ಸದಸ್ಯ ಲೋಕೇಶ್, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪುಟ್ಟಮಾದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮೇಶ್, ಪಿಡಿಒಗಳಾದ ಮಹದೇವು, ಲಕ್ಷ್ಮೀ, ಅಧಿಕಾರಿಗಳಾದ ಮಂಜುನಾಥ್, ಶೋಭಾ, ನಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net