ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸಾವು

18 RMN-MGD P1
Published on

ಮಾಗಡಿ: ತಾಲೂಕಿನ ವೀರೇಗೌಡನದೊಡ್ಡಿ ಗ್ರಾಮದಲ್ಲಿ ಜಮೀನು ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತರೊಬ್ಬರು ಮೃತಪಟ್ಟಿದ್ದಾರೆ.

ವೀರೆಗೌಡನದೊಡ್ಡಿ ನಿವಾಸಿ ಚಂದ್ರಶೇಖರಯ್ಯ (34) ಮೃತ. ಜಮೀನಿನಲ್ಲಿದ್ದ ಬದು ಹತ್ತಿಸುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಅದರಡಿ ಸಿಲುಕಿ ಗಾಯಗೊಂಡ ಅವರನ್ನು ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಭಾನುವಾರ ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆದಿದೆ. ಮೂರು ವರ್ಷದ ಹಿಂದೆ ಚಂದ್ರಶೇಖರಯ್ಯ ಮದುವೆಯಾಗಿದ್ದು, ಒಂದೂವರೆ ವರ್ಷದ ಹೆಣ್ಣು ಮಗುವಿದೆ. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net