ಮಾಗಳದಲ್ಲಿ ಮುಳ್ಳುಗದ್ದುಗೆ ಉತ್ಸವ ಅದ್ದೂರಿ

Published on

ಹೂವಿನಹಡಗಲಿ: ಮಾಗಳ ಗ್ರಾಮದಲ್ಲಿ ಆಂಜನೇಯ ಸ್ವಾಮಿ ಜಾತ್ರೋತ್ಸವ ಅಂಗವಾಗಿ ಸೋಮವಾರ ಸಂಜೆ ಮುಳ್ಳುಗದ್ದುಗೆ ಉತ್ಸವ ಸಂಭ್ರಮದಿಂದ ಜರುಗಿತು.

ಉತ್ಸವ ಮೂರ್ತಿಯನ್ನು ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಪಲ್ಲಕ್ಕಿಯಲ್ಲಿರಿಸಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಚಿಂಚಲಿ ಕಣಕಪ್ಪ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ಸ್ವಾಮಿ ಪಲ್ಲಕ್ಕಿ ಮಹೋತ್ಸವವನ್ನು ಗ್ರಾಮದ ಸಮೀಪದ ತುಂಗಭದ್ರಾ ನದಿಯವರೆಗೂ ಕಾರಿಮುಳ್ಳುಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ದೇವಸ್ಥಾನದ ಬಳಿ ತೆರಳಿ ಕಾರಿ ಮುಳ್ಳಿನೊಂದಿಗೆ ದೇವಸ್ಥಾನವನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ನೆರೆದಿದ್ದ ಭಕ್ತರು ರಾಮ, ರಾಮ ಗೋವಿಂದ ಎಂಬ ಜಯಘೋಷದೊಂದಿಗೆ ಮುಳ್ಳುಗದ್ದುಗೆ ಉತ್ಸವಕ್ಕೆ ಸಾಕ್ಷಿಯಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net