ಮಹಾ ಸಚಿವರ ವಿರುದ್ಧ ಕ್ರಮಕೈಗೊಳ್ಳದೆ ಅವಮಾನ

01
Published on

ಬೆಳಗಾವಿ: ಇಲ್ಲಿನ ಧರ್ಮವೀರ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ವೇಳೆ ಮಹಾರಾಷ್ಟ್ರ ಪರ ೋಷಣೆ ಕೂಗಿದ ಮಹಾರಾಷ್ಟ್ರ ಸಚಿವರ ವಿರುದ್ಧ ನಗರದ ಪೊಲೀಸರು ಕ್ರಮ ಕೈಗೊಳ್ಳದೆ ಕನ್ನಡಿಗರಿಗೆ ಅವ ಮಾನ ಮಾಡಿದ್ದಾರೆ ಎಂದು ಕಿತ್ತೂರು ಕರ್ನಾಟಕ ಸೇನೆ ಅಧ್ಯಕ್ಷ ಮಹಾದೇವ ತಳವಾರ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ ಪರ ೋಷಣೆ ಕೂಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ವಿಡಿಯೋ ತುಣುಕುಗಳು, ಪತ್ರಿಕಾ ವರದಿಗಳ ಸಮೇತ ಠಾಣೆಗೆ ನೀಡಲಾಗಿದೆ.

ದರೆ, ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ. ನ್ಯಾಯಾಲಯ ವ್ಯಾಪ್ತಿಗೆ ಒಳ್ಳಪಟ್ಟಿದೆ ಎಂದು ಪತ್ರ ಬರೆದು ಕೈ ಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾಡಳಿತ ಪರವಾನಗಿ ಇಲ್ಲದಿದ್ದರೂ ಶಿಷ್ಟಾಚಾರ ಉಲ್ಲಂಘಿಸಿ ಮಹಾರಾಷ್ಟದ ಸಚಿವರನ್ನು ಕರೆ ತಂದು ಕನ್ನಡ ನೆಲದಲ್ಲಿ ಮಹಾರಾಷ್ಟ್ರ ಪರ ಘೋಷಣೆ ಕೂಗಿದಾಗ ಶಾಸಕ ಅಭಯ ಪಾಟೀಲ ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.

ಶಾಸಕ ಅಭಯ ಪಾಟೀಲ ಧೈರ್ಯ ಇದ್ದರೆ ಮಹಾರಾಷ್ಟ್ರಕ್ಕೆ ಹೋಗಿ ಜೈ ಕರ್ನಾಟಕ ಎಂದು ಘೋಷಣೆ ಕೂಗಲಿ ಎಂದು ಸವಾಲು ಹಾಕಿದರು. ಪೊಲೀಸರು ಯಾರ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ. ನಾವು ಸುಮ್ಮನೆ ಕುಳಿತುಕೊಳ್ಳದೇ ಕಾನೂನು ತಜ್ಞರ ಸಲಹೆ ಪಡೆದು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದರು. ಕಸ್ತೂರಿ ಬಾವಿ, ಸುರೇಶ ಖಿರಾಯಿ, ಪ್ರೇಮ ಕೋಲಕಾರ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net