ಸಮಾನತೆಯ ಪರಿಕಲ್ಪನೆ ಬಿತ್ತಿದ ಮಹಾಗುರು

Mahaguru who sowed the concept of equality
Published on

ಮಡಿಕೇರಿ 

ಜಾತಿ, ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭ್ರಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು  ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಗರದ ಓಂಕಾರ ಸದನ ಸಭಾಂಗಣದಲ್ಲಿ ಬುಧವಾರ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು  ಮಾತನಾಡಿದರು.  

1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್‍ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಗುರುಗಳು ಜನಿಸಿದರು. ಶಂಕರಾಚಾರ್ಯರ ಅದ್ವೈತದ ಸಾರದಲ್ಲಿ ತಮ್ಮ ದಾರ್ಶನಿಕತೆಯನ್ನು ಪ್ರತಿಪಾದಿಸಿದ ನಾರಾಯಣ ಗುರುಗಳು, ಎಲ್ಲರನ್ನೂ ಒಂದಾಗಿ ಕಂಡರು. ಇರುವವನು ಒಬ್ಬನೇ ಪರಮಾತ್ಮ, ಒಂದೇ ತತ್ವ, ಒಂದೇ ಸತ್ಯ. ಎಲ್ಲವೂ ಒಂದೇ ಅಂದಮೇಲೆ ಭೇದ-ಭಾವವಿಲ್ಲ, ಮೇಲು ಕೀಳಿಲ್ಲ. ಎಲ್ಲರಲ್ಲಿರುವ ಪರಮಾತ್ಮ ಒಬ್ಬನೇ ಅಂದಮೇಲೆ, ಅಲ್ಲಿ ಮೇಲು ಕೀಳೆಂಬ ಮಾತೆಲ್ಲಿ ಎಂದು ಪ್ರಶ್ನಿಸಿದವರು ಅವರು. 

ಮಾನವೀಯತೆ ಮಲಗಿ, ಮೂಢನಂಬಿಕೆಗಳು ಎದ್ದಿದ್ದ ಕಾಲದಲ್ಲಿ ಮಹಾನ್ ಮಾನವತಾವಾದಿಯಾಗಿ ಸಮಾಜದ ಕಣ್ಣರಳಿಸಿದ ದಾರ್ಶನಿಕ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು. ವ್ಯಕ್ತಿ ಸತ್ತರೂ ಅವರು ಸಮಾಜಕ್ಕೆ ಸಾರಿದ ಸಾಮಾಜಿಕ ಮಾನವೀಯ ಮೌಲ್ಯಗಳು ಸಾಯಬಾರದು. ಅದು ಎಂದೆಂದಿಗೂ ಜೀವಂತ ಎಂದರು.

ಸರಿಯಾದ ಸಮಯದಲ್ಲಿ ಸಂಸ್ಕøತ ಅಭ್ಯಾಸ, ಪುರಾಣ ಜ್ಞಾನ, ರಾಮಾಯಣ ಸೇರಿದಂತೆ ಧರ್ಮಗ್ರಂಥಗಳ ಜ್ಞಾನ ಗುರುಗಳಿಗೆ 

ಕರಾವಳಿ ಭಾಗದ ಬಿಲ್ಲವರಿಗೆ ನಾರಾಯಣ ಗುರುಗಳು ಇಂದಿಗೂ ಆರಾಧ್ಯ ದೈವ. ನಾರಾಯಣ ಗುರುಗಳ ಪ್ರಭಾವ ಕರಾವಳಿಯಲ್ಲಿ ಆಯಿತು. ಈಗ ಗಲ್ಲಿ ಗಲ್ಲಿಯಲ್ಲೂ, ಜಾತಿ ಧರ್ಮ ಮೀರಿ ಗುರುಗಳನ್ನು ಆರಾಧಿಸಲಾಗುತ್ತಿದೆ. ಇದು ಇವರ ಸಾಮಾಜಿಕ ಚಿಂತನೆಗೆ ಸಿಕ್ಕ ಮನ್ನಣೆ ಮತ್ತು ಗೌರವ ಎಂದು ಹೇಳುದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ರಘು ಆನಂದ, ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳು ಯಾವುದೇ ಸಮುದಾಯಕ್ಕೆ ಮೀಸಲಿರದೆ ವಿಶ್ವಕ್ಕೆ ಹಿಂದೂ ಸಮಾಜದ ಸಂದೇಶ ಸಾರಿದವರು. ಕೆಳವರ್ಗದ ಸಮುದಾಯದ ಜನಾಂಗದ ಪ್ರಧಾನ ಸ್ಥಾನ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು. 

ವೇದಿಕೆಯಲ್ಲಿ ಟಿ.ಕೆ.ಪಾಂಡುರಂಗ, ಬಾಲಕೃಷ್ಣ, ಲೀಲಾವತಿ, ಆನಂದ, ಬಾಲಕೃಷ್ಣ ಮದೆ, ಮೋಹನ್, ವಿದ್ವಾನ್ ಬಿ.ಸಿ.ಶಂಕರಯ್ಯ,. ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಮಣಜೂರು ಮಂಜುನಾಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net