

ವಿಜಯವಾಣಿ ಸುದ್ದಿಜಾಲ ಉಡುಪಿ
ಮಹಾಲಕ್ಮೀ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಬ್ಯಾಂಕ್ನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಶೇ.90, ದ್ವಿತೀಯ ಪಿಯುಸಿಯಲ್ಲಿ ಶೇ.85 ಹಾಗೂ 2023-&24ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.70 ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇತರ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿಯಲ್ಲಿ ಶೇ.95, ದ್ವಿತೀಯ ಪಿಯುಸಿಯಲ್ಲಿ ಶೇ.90 ಹಾಗೂ 2023--24ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.75 ಅಂಕ ಗಳಿಸಿರಬೇಕು.
ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನ ಎಲ್ಲ ಶಾಖೆ ಹಾಗೂ ಬ್ಯಾಂಕ್ನ ವೈಬ್ಸೈಟ್ www.mahalakshmicoopbank.com ನಲ್ಲಿ ಅರ್ಜಿಗಳು ಲಭ್ಯವಿದೆ. ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನ. ಅರ್ಹ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳುವಂತೆ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.