

ಉಡುಪಿ: ಮಹಾಲಕ್ಷ್ಮಿ ಬ್ಯಾಂಕ್ ನಿರಂತರ 14 ವರ್ಷಗಳಿಂದ ಅತಿಹೆಚ್ಚು ಡಿವಿಡೆಂಡ್ ನೀಡುವ ಕರಾವಳಿ ಭಾಗದ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಕೃತ ಬ್ಯಾಂಕಿಗೆ ಸರಿಸಮನಾಗಿ ಡಿಜಿಟಲ್ ಬ್ಯಾಂಕಿಂಗ್ ತಂತ್ರಜ್ಞಾನದೊಂದಿಗೆ ಯುಪಿಐ ಸೌಲಭ್ಯವನ್ನು ಅಳವಡಿಸಿಕೊಂಡು ಗ್ರಾಹಕಸ್ನೇಹಿ ಸೇವೆ ನೀಡುತ್ತಿದೆ. ಈ ವರ್ಷ 6.60 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ ತಿಳಿಸಿದರು.
ಮಹಾಲಕ್ಷಿ$್ಮ ಕೋ&ಆಪರೇಟಿವ್ ಬ್ಯಾಂಕ್ 46ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2023-&24ರ ವರ್ಷಾಂತ್ಯಕ್ಕೆ ರೂ. 532 ಕೋಟಿ ಬ್ಯಾಂಕಿನ ಠೇವಣಿ ಹಾಗೂ ರೂ. 388 ಕೋಟಿ ಸಾಲ ಮತ್ತು ಮುಂಗಡ ಹೊಂದಿದ್ದು, ಬ್ಯಾಂಕಿನ ಒಟ್ಟು ವಹಿವಾಟು ರೂ. 921.12 ಕೋಟಿ ರೂ.ಗೆ ಏರಿಕೆಯಾಗಿದೆ. ರೂ. 627.52 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಹಾಸನ, ಮೈಸೂರು, ಮಂಡ್ಯ ಜಿಲ್ಲೆಗೆ ವ್ಯವಹಾರ ಕ್ಷೇತ್ರ ವಿಸ್ತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ವಿಸ್ತರಿಸುವ ಯೋಜನೆ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯೆ ಮಾಲಾ ಬಿ. ನಾರಾಯಣ ರಾವ್, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯೆ ರಜನಿ ಹೆಬ್ಬಾರ್ ಅವರನ್ನು ಗೌರವಿಸಲಾಯಿತು. ಶೈಕ್ಷಣಿಕ ಕ್ಷೇತ್ರದ ಸಾಧಕರಾದ ನೀರಜ ಎಸ್. ಸುವರ್ಣ, ನಮೃತ ಎಚ್. ಕುಂದರ್ ಅವರನ್ನು ಸನ್ಮಾನಿಸಲಾಯಿತು.
ಬ್ಯಾಂಕಿನ ನಿವ್ವಳ ಲಾಭದಲ್ಲಿ ಸಹಕಾರ ಶಿಕ್ಷಣ ನಿಧಿಗೆ 9,91,371 ರೂ. ಚೆಕ್ನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಅಧ್ಯಕ್ಷ ಯಶ್ಪಾಲ್ ಸುವರ್ಣ ಹಸ್ತಾಂತರಿಸಿದರು.
ಸಮಾರಂಭದಲ್ಲಿ ನಾಡೋಜ ಡಾ. ಜಿ. ಶಂಕರ್, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೀನುಗಾರ ಮುಖಂಡರಾದ ಆನಂದ ಪಿ. ಸುವರ್ಣ, ರಾಮಚಂದ್ರ ಕುಂದರ್, ಶಿವಪ್ಪ ಕಾಂಚನ್, ಗುಂಡು ಅಮೀನ್, ಮೋಹನ್ ಬೆಂಗ್ರೆ, ಶ್ರೀಮತಿ ಬೇಬಿ ಸಾಲ್ಯಾನ್, ಉದಯ ಹಟ್ಟಿಯಂಗಡಿ, ಸುಮಿತ್ರ ಕುಂದರ್, ಸಹಕಾರಿ ಇಲಾಖೆಯ ಅಧಿಕಾರಿ ಸುಧೀರ್, ಬ್ಯಾಂಕಿನ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್, ನಿರ್ದೇಶಕರಾದ ಶಶಿಕಾಂತ ಬಿ ಕೋಟ್ಯಾನ್, ಶೋಭೇಂದ್ರ ಸಸಿಹಿತ್ಲು, ಕೆ ಸಂಜೀವ ಶ್ರೀಯಾನ್, ವಿನಯ ಕರ್ಕೇರ, ನಾರಾಯಣ ಟಿ. ಅಮೀನ್, ಸುರೇಶ್ ಬಿ ಕರ್ಕೇರ, ಶಿವರಾಮ ಕುಂದರ್, ವನಜಾ ಜೆ ಪುತ್ರನ್, ಸದಾನಂದ ಬಳ್ಕೂರು, ವೃತ್ತಿಪರ ನಿರ್ದೇಶಕ ಮಂಜುನಾಥ ಎಸ್. ಕೆ, ಹಾಗೂ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕ ಶರತ್ ಕುಮಾರ್ ಶೆಟ್ಟಿ ಎನ್ ಮೊದಲಾದವರು ಉಪಸ್ಥಿತರಿದ್ದರು.