ಶಕ್ತಿಯುತ ರಾಷ್ಟ್ರಕ್ಕಾಗಿ ಬಿಜೆಪಿ ಬೆಂಬಲಿಸಿ

MLP 251
Published on

ಮಹಾಲಿಂಗಪುರ: ದೇಶದಲ್ಲಿ 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಸಲುವಾಗಿ ಜಾತಿ-ಜಾತಿಗಳ, ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ದೇಶವನ್ನು ಅಧೋಗತಿಯತ್ತ ಒಯ್ದಿತ್ತು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ಸಮೀಪದ ರನ್ನಬೆಳಗಲಿ ಪಟ್ಟಣ ಪಂಚಾಯಿತಿ ಚುನಾವಣೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಶುಕ್ರವಾರ ಪಟ್ಟಣದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿ ನಂತರ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈ ಬಲಪಡಿಸಲು, ಶಕ್ತಿಯುತ ರಾಷ್ಟ್ರಕ್ಕಾಗಿ ಬಿಜೆಪಿ ಬೆಂಬಲಿಸಿ. ಕಾಂಗ್ರೆಸ್ ಪಕ್ಷದವರು ಮತ ಕೇಳಲು ಬಂದರೆ ಪಟ್ಟಣಕ್ಕೆ ನೀವೇನು ಮಾಡಿದ್ದೀರಿ? ಎಂದು ಪ್ರಶ್ನಿಸಿರಿ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ಕಾಂಗ್ರೆಸ್ ಮುಕ್ತ ದೇಶವಾಗಲು ಇನ್ನು ಬಹಳ ದಿನಗಳು ಉಳಿದಿಲ್ಲ. ದೇಶವಾಸಿಗಳು ನೆಮ್ಮದಿಯಿಂದ ನಿದ್ರೆ ಮಾಡಲು ಬಿಜೆಪಿ ಅಧಿಕಾರದಲ್ಲಿರಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜುಗೌಡ ಯಡಹಳ್ಳಿ, ಕಾರ್ಯದರ್ಶಿ ಶ್ರೀಶೈಲಗೌಡ ಪಾಟೀಲ, ಮುಧೋಳ ತಾಲೂಕು ಅಧ್ಯಕ್ಷ ಹಣಮಂತ ತುಳಸಿಗೇರಿ, ನಗರ ಘಟಕದ ಅಧ್ಯಕ್ಷ ಡಾ.ರವಿ ನಂದಗಾಂವಿ, ಮುಖಂಡರಾದ ಕೆ.ಆರ್.ಮಾಚಪ್ಪನವರ, ಪ್ರಕಾಶ ಚಿತ್ತರಗಿ, ವಿರೇಶ ಪಂಚಕಟ್ಟಿಮಠ, ಲೋಕಣ್ಣ ಕತ್ತಿ, ಬಸವರಾಜ ಮಳಲಿ, ಭೀಮನಗೌಡ ಪಾಟೀಲ, ಅರುಣ ಕಾರಜೋಳ, ಚಿಕ್ಕಪ್ಪ ನಾಯಕ, ರಂಗಪ್ಪ ಒಂಟಗೋಡಿ, ದುಂಡಪ್ಪ ಶಿರೋಳ, ಅಪ್ಪಣ್ಣ ಪೂಜೇರಿ ಹಾಗೂ ಬಿಜೆಪಿ ಅಭ್ಯರ್ಥಿಗಳು ಇದ್ದರು. ಎಚ್.ಜಿ.ರಂಗಾಪುರ ನಿರೂಪಿಸಿದರು.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net