ಜಿಲ್ಲೆಯಲ್ಲಿ 75 ಸಾವಿರ ಜನರಿಗೆ ವ್ಯಾಕ್ಸಿನ್

MLP 171
Published on

ಮಹಾಲಿಂಗಪುರ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಲಸಿಕೆ ಮಹಾಮೇಳ ನಡೆಸಲಾಯಿತು.

ಶಾಲೆಯ ಲಸಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲೆಯಲ್ಲಿ ಶುಕ್ರವಾರ 75 ಸಾವಿರ ಜನರಿಗೆ ಉಚಿತ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲ ಕಡೆ ಸರ್ಕಾರಿ ಸಿಬ್ಬಂದಿ ಈ ದಿಸೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗುರಿ ಮುಟ್ಟುತ್ತೇವೆ ಎಂದರು.

ಜಮಖಂಡಿ ಎಸಿ ಸಿದ್ದು ಹುಲ್ಲೊಳ್ಳಿ, ರಬಕವಿ-ಬನಹಟ್ಟಿ ತಹಸೀಲ್ದಾರ್ ಸಂಜಯ ಇಂಗಳೆ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ, ಮಹಾಲಿಂಗಪುರ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಮುಖ್ಯ ವೈದ್ಯಾಧಿಕಾರಿ ಡಾ.ಸಂಜೀವಕುಮಾರ ತೇಲಿ, ಎಂ.ಬಿ.ಗೋಣಿ ಇತರರಿದ್ದರು.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net