

ಮಂಡ್ಯ: ಅಗತ್ಯದಲ್ಲಿರುವವರಿಗೆ ನೆರವಾಗುವ ಉದ್ದೇಶದಿಂದ ಹಾಗೂ ಸೇವಾ ಕಾರ್ಯ ಚಟುವಟಿಕೆ ಕೈಗೊಳ್ಳಲು ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಷನ್ ಅಸ್ಥಿತ್ವಕ್ಕೆ ತರಲಾಗಿದೆ ಫೌಂಡೇಷನ್‌ನ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ತಿಳಿಸಿದರು.
ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಅಗತ್ಯವಿರುವವರಿಗೆ ಆರ್ಥಿಕ ಹಾಗೂ ಅಗತ್ಯ ಸೇವೆಗಳನ್ನು ನೀಡಲಾಗುವುದು. ಈ ನಿಟ್ಟಿನಲ್ಲಿ ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಕಚೇರಿ ತೆರೆಯಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಗ್ರಾಮೀಣ ಭಾಗದ ಮೊದಲ ಒಂದು ಸಾವಿರ ದ್ವಿಚಕ್ರ ವಾಹನ ಸವಾರರಿಗೆ ಉಚಿತವಾಗಿ ಅಪಘಾತ ಮತ್ತು ಆರೋಗ್ಯ ವಿಮೆ ಮಾಡಿಸಲಾಗುವುದು. ವಿದ್ಯಾಭ್ಯಾಸ ವಂಚಿತ ಮಕ್ಕಳಿಗೆ ನೆರವು ನೀಡುವುದು. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸುವುದು. ಅಂಗವಿಕಲ ಮತ್ತು ವಯೋವೃದ್ಧರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡುವುದು ಸೇರಿದಂತೆ ಮೊದಲ ಹಂತದಲ್ಲಿ 16 ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಅಗತ್ಯವುಳ್ಳವರು ಮಂಡ್ಯ ತಾಲೂಕು ಬಸರಾಳು ಗ್ರಾಮದಲ್ಲಿರುವ ಕಚೇರಿ ಅಥವಾ ಫೌಂಡೇಷನ್‌ನ ಪದಾಧಿಕಾರಿಗಳನ್ನು ಭೇಟಿ ಮಾಡಿ ನೆರವು ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಫೌಂಡೇಷನ್‌ನ ಖಜಾಂಚಿ ಶಶಿಕುಮಾರ್, ಸಂಯೋಜನಾ ಕಾರ್ಯದರ್ಶಿ ಮೋಹನ್, ಸದಸ್ಯರಾದ ಅನಿಲ್‌ಗೌಡ, ಶ್ರೀನಿವಾಸ್ ಇದ್ದರು.