

ಕಡಬ: ಅತ್ಯುತ್ತಮ ವ್ಯವಹಾರಕ್ಕಾಗಿ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ನೀಡಿ ಗೌರವಿಸಲಾಯಿತು.
ಸಂಘದ ಸಾಧನೆಯನ್ನು ಪರಿಗಣಿಸಿ ಇತ್ತೀಚೆಗೆ ಬಿ.ಸಿ.ರೋಡ್‌ನಲ್ಲಿ ನಡೆದ ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ವಾರ್ಷಿಕ ಮಹಾಸಭೆಯಲ್ಲಿ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿದರು. ಆಲಂಕಾರು ಸಂಘದ ಅಧ್ಯಕ್ಷ ಎನ್.ಮುತ್ತಪ್ಪ ಪೂಜಾರಿ ನೈಯ್ಯಲ್ಗ, ಉಪಾಧ್ಯಕ್ಷ ಜನಾರ್ದನ ಪೂಜಾರಿ ಕದ್ರ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಲಿಂಗಪ್ಪ ಪೂಜಾರಿ ಸ್ವೀಕರಿಸಿದರು.
ಮೂರ್ತೆದಾರರ ಮಹಾಮಂಡಲದ ಉಪಾಧ್ಯಕ್ಷ ರಾಜೇಶ್ ಸುವರ್ಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಶೋರ್ ಕುಮಾರ್, ನಿರ್ದೇಶಕರಾದ ಶಿವಪ್ಪ ಸುವರ್ಣ, ಅಣ್ಣಿ ಯಾನೆ ನೋಣಯ್ಯ, ವಿಶ್ವನಾಥ ಪೂಜಾರಿ ಪಂಜ, ವಿಶ್ವನಾಥ, ಆರ್.ಸಿ.ನಾರಾಯಣ, ಪುರುಷ ಎನ್.ಸಾಲಿಯಾನ್, ಪದ್ಮನಾಭ ಕೋಟ್ಯಾನ್, ಹರೀಶ್ ಸುವರ್ಣ, ಗಣೇಶ್ ಪೂಜಾರಿ, ಉಷಾ ಅಂಚನ್ ಮತ್ತು ಶೈಲಜಾ ಉಪಸ್ಥಿತರಿದ್ದರು.