ಮೂರ್ತೆದಾರರ ಸಹಕಾರಿ ಮಹಾಮಂಡಲ ಮಹಾಸಭೆ

sabhe
Published on

ಬಂಟ್ವಾಳ: ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ಬಿ.ಸಿ.ರೋಡ್ ಇದರ ವಾರ್ಷಿಕ ಮಹಾಸಭೆ ಭಾನುವಾರ ಮಹಾಮಂಡಲ ಕಚೆೇರಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷ ಸಂಜೀವ ಪೂಜಾರಿ ಮಾತನಾಡಿ ಸಂಘ 33 ಕೋಟಿ ರೂ. ವ್ಯವಹಾರ ಮಾಡಿ 2023-24ನೇ ಸಾಲಿನಲ್ಲಿ 9 ಲಕ್ಷ ಲಾಭ ಪಡೆದಿದೆ. ನಷ್ಟದಲ್ಲಿದ್ದ ಮಹಾಮಂಡಲ ಪ್ರಸ್ತುತ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಲಾಭದಾಯಕವಾಗಿ ನಡೆಯುತ್ತಿದೆ ಎಂದು ಸಭೆಗೆ ತಿಳಿಸಿದರು.

ಮುಂದಿನ ಹಂತದಲ್ಲಿ ಮಹಾಮಂಡಲ ವತಿಯಿಂದ ಎರಡು ಶಾಖೆಗಳ ಕಾರ್ಯಯೋಜನೆಯಲ್ಲಿದ್ದು ಅನುಷ್ಠಾನಗೊಳಿಸಲಾಗುವುದು ಎಂದರು. ಜಿಲ್ಲೆಯಲ್ಲಿ 100 ಮೂರ್ತೆದಾರರ ಸಂಘ ತೆರೆಯಬೇಕೆಂದು ಆಶಯ ವ್ಯಕ್ತಪಡಿಸಿದರು.

ಅಲಂಕಾರು ಮೂರ್ತೆದಾರರ ಸಹಕಾರಿ ಸಂಘ ಅಧ್ಯಕ್ಷ, ಕುಂಬ್ರ ಮೂರ್ತೆದಾರರ ಸಹಕಾರಿ ಸಂಘ ಅಧ್ಯಕ್ಷ, ಉಪಾಧ್ಯಕ್ಷರು, ಉಪ್ಪಿನಂಗಡಿ ಮುಖ್ಯಕಾರ್ಯನಿರ್ವಹಣಾಧಿಕಾರಿ, ಸಚಿಪಮುನ್ನೂರು ಮೂರ್ತೆದಾರರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಮಂಡಲದ ಅಭಿವೃದ್ಧಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ದ.ಕ. ಜಿಲ್ಲೆಯಲ್ಲಿ ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಅತ್ಯುತ್ತಮ ವ್ಯವಹಾರ ಗಳಿಸಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಅಲಂಕಾರು ಮೂರ್ತೆದಾರರ ಸಹಕಾರಿ ಸಂಘ, ಸಜಿಪ ಮುನ್ನೂರು ಮೂರ್ತೆದಾರರ ಸಹಕಾರಿ ಸಂಘಗಳಿಗೆ ದ.ಕ.ಜಿಲ್ಲಾ ಅತ್ಯುತ್ತಮ ಮೂರ್ತೆದಾರರ ಸಹಕಾರಿ ಸಂಘ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಕುಮಾರ್ ವರದಿ ವಾಚಿಸಿದರು. ನಿರ್ದೇಶಕಿ ಶೈಲಜಾ ರಾಜೇಶ್ ಸ್ವಾಗತಿಸಿದರು. ಉಷಾ ಅಂಚನ್ ನಿರೂಪಿಸಿದರು. ಉಪಾಧ್ಯಕ್ಷ ರಾಜೇಶ್ ಸುವರ್ಣ, ನಿರ್ದೇಶಕರಾದ ವಿಜಯ್ ಕುಮಾರ್ ಸೊರಕೆ, ಆರ್.ಸಿ.ನಾರಾಯಣ್, ಪುರುಷ ಎನ್. ಸಾಲ್ಯಾನ್, ಅಣ್ಣಿಯಾನೆ ನೋಣಯ್ಯ ಪೂಜಾರಿ, ವಿಶ್ವನಾಥ ಪೂಜಾರಿ ಪಂಜ, ಬೇಬಿ ಕುಂದ್ರ, ವಿಶ್ವನಾಥ ಬಿ., ಶಿವಪ್ಪ ಸುವರ್ಣ, ಪದ್ಮನಾಭ ಕೋಟ್ಯಾನ್, ಹರೀಶ್ ಪೂಜಾರಿ, ಗಣೇಶ್ ಪೂಜಾರಿ, ಶೈಲಜಾ ಕೆ., ವಕೀಲ ಚಿದಾನಂದ ಎಂ. ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net