ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜನವರಿಗೆ ಮಹಾಮಸ್ತಕಾಭಿಷೇಕ

h13-Varur Sri 1
Published on


ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ಶ್ರೀ ನವಗ್ರಹ ತೀರ್ಥದ ನವ ತೀರ್ಥಂಕರರ ಮಹಾಮಸ್ತಕಾಭಿಷೇಕವನ್ನು ಜನವರಿ (2025)ಯಲ್ಲಿ ವರೂರು ಬಳಿಯ ಶ್ರೀ ನವಗ್ರಹ ತೀರ್ಥ ಕ್ಷೇತ್ರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು ಹೇಳಿದರು.
ತಾಲೂಕಿನ ವರೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12ವರ್ಷಕ್ಕೊಮ್ಮೆ ಈ ಮಹಾಮಸ್ತಕಾಭಿಷೇಕ ನಡೆಯುತ್ತದೆ. 27 ದ್ರವ್ಯಗಳಿಂದ ನವಗ್ರಹ ತೀರ್ಥಂಕರಿಗೆ ಅಭಿಷೇಕ ಮಾಡಿಸಲಾಗುವುದು. 120ಕ್ಕೂ ಹೆಚ್ಚು ದೇಶಗಳಿಂದ ಭಕ್ತರು ಆಗಮಿಸಲಿದ್ದಾರೆ. ಅಮೆರಿಕದ ಜಿತೇಂದ್ರ ಜೈನ್ ಅವರು ಪ್ರಮುಖರಾಗಿ ಕಾರ್ಯನಿರ್ವಹಿಸುವರು. ದೇಶದ ವಿವಿಧ ರಾಜ್ಯಗಳಿಂದ 16 ಯಜಮಾನರನ್ನು ನಿಯೋಜಿಸಲಾಗಿದೆ. ಮಹಾಮಸ್ತಾಭಿಷೇಕದ ಅಧ್ಯಕ್ಷರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಚಿವ ಡಿ. ಸುಧಾಕರ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ವಿಶ್ವ ಶಾಂತಿಗಾಗಿ 9,999 ಹೋಮ-ಹವನದೊಂದಿಗೆ ಪೂರ್ಣಾಹುತಿ ನೆರವೇರಲಿದೆ. 5,500 ದಂಪತಿಗಳು ನವ ತೀರ್ಥಂಕರಿಗೆ ಪೂಜೆ ಸಲ್ಲಿಸಲಿದ್ದಾರೆ. 124 ಮಹಾರಥಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. 200 ದಿಗಂಬರ ಸ್ವಾಮೀಜಿ, 405 ಸರ್ವಧರ್ಮ ಸ್ವಾಮಿಜಿಗಳಿಗೆ ಆಹ್ವಾನ ನೀಡಲಾಗಿದೆ. 11 ದಿನಗಳವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಸೇರಿದಂತೆ ರಾಷ್ಟ್ರದ ವಿವಿಧ ರಾಜ್ಯದ 27 ನೇತಾರರನ್ನು ಆಹ್ವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಕಾರ್ಯಕ್ರಮಕ್ಕೆ ಶೀಘ್ರವೇ ಆಹ್ವಾನಿಸಲಾಗುವುದು. 14 ಭಟ್ಟಾರಕರು ಮಹಾ ಮಸ್ತಾಭಿಷೇಕ ಸಮಿತಿಯ ಗೌರವಾಧ್ಯಕ್ಷರಾಗಿದ್ದಾರೆ ಎಂದರು.
ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿಯ ಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಅದ್ದೂರಿಯಾಗಿ ಮಹಾಮಹಸ್ತಕಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ನಡೆಸಿದ್ದು, ಒಬ್ಬೊಬ್ಬರಿಗೆ ಉಸ್ತುವಾರಿ ವಹಿಸಲಾಗಿದೆ. ನಮ್ಮ ಸಮುದಾಯದ ಜನಸಂಖ್ಯೆ ಕುರಿತು ಸರ್ವೇ ಮಾಡಲಾಗಿದೆ. ಅವರ ಜೀವನಸುಧಾರಣೆ ಕುರಿತು ಹಂತ ಹಂತವಾಗಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net