ಮದ್ಯದ ಹನಿಕೂಡ ಹೃದಯಕ್ಕೆ ಹಾನಿಕಾರಕ

udp-1-shivayogi
Published on

ಉಡುಪಿ: ದುಶ್ಚಟದ ಚಕ್ರವ್ಯೂಹದಲ್ಲಿ ಸಿಲುಕಿದರೆ ಅದರಿಂದ ಹೊರಬರುವುದು ಕಷ್ಟ. ಅನೇಕ ಜನರು ದುಶ್ಚಟಗಳಿಂದಲೇ ಪ್ರಾಣಗಳನ್ನು ಕಳೆದುಕೊಂಡಿದ್ದಾರೆ. ಅನೇಕರು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಾರೆ. ಮದ್ಯದ ಹನಿಕೂಡ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಬಗ್ಗೆ ಯಾವುದೇ ಉತೆೆ ಸಲ್ಲದು ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆ ಮನೋವೈದ್ಯ ಡಾ.ಪಿ.ವಿ ಭಂಡಾರಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ಭಾರತೀಯ ವೈದ್ಯಕಿಯ ಸಂಘ, ವಿದ್ಯಾರತ್ನ ನರ್ಸಿಂಗ್​ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ನಡೆದ ವ್ಯಸನ ಮುಕ್ತ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು.

ವ್ಯಸನಮುಕ್ತ ಸಮಾಜವನ್ನು ನಿಮಾರ್ಣ ಮಾಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದರೆ ಮಾತ್ರ ಉತ್ತಮ ಸಮಾಜ ನಿಮಾರ್ಣ ಮಾಡಲು ಸಾಧ್ಯ. ಒಬ್ಬರಿಂದಲೇ ಸಮಾಜ ಬದಲಾವಣೆ ಮಾಡಲು ಆಗುವುದಿಲ್ಲ. ಆಧುನಿಕ ಯುಗದಲ್ಲಿ ಮೊಬೈಲ್​ ನಿರಂತರವಾಗಿ ನೋಡುವುದು ಸಹ ಒಂದು ವ್ಯಸನವಾಗಿದೆ. ಇದರಿಂದ ದೂರವಿರಬೇಕು. ದೇಹಕ್ಕೆ ಹಾನಿಕರವಾಗುವಂತಹ ಮದ್ಯಪಾನ, ತಂಬಾಕು ಉತ್ಪನ್ನಗಳು, ಅಮಲು ಬರುವಂತಹ ಡ್ರಗ್ಸ್​ಗಳು ಸೇರಿದಂತೆ ಮತ್ತಿತರ ದುಶ್ಚಟಗಳಿಂದ ದೂರವಿರಬೇಕು. ಮಾನಸಿಕವಾಗಿ ಹಾಗೂ ದೈಹಿಕವಾಗಿ ಉತ್ತಮ ಸ್ಥಿತಿಯಲ್ಲಿ ಇರುವವರನ್ನು ಮಾತ್ರ ಆರೋಗ್ಯವಂತರು ಎನ್ನಬಹುದು. ಪ್ರತಿಯೊಬ್ಬರೂ ಈ ಬಗ್ಗೆ ಗಮನಹರಿಸಬೇಕು ಎಂದರು.

ಸಾಮಾನ್ಯವಾಗಿ ಮನುಷ್ಯನ ಆಲೋಚನೆಗಳನ್ನು ಬದಲಿಸುವ ಕಾರ್ಯವು ಮೆದುಳಿಗೆ ಇರುತ್ತದೆ. ಮಾದಕ ವಸ್ತುಗಳ ಬಳಕೆಯಿಂದ ಮೆದುಳಿನಲ್ಲಿ ನೈಸರ್ಗಿಕವಾಗಿ ಉತ್ಪಾದನೆ ಆಗುವ ರಾಸಾಯನಿಕಗಳು ಮೆದುಳಿನ ಕಾರ್ಯವಿಧಾನವನ್ನು ಬದಲಿಸುತ್ತದೆ ಎಂದರು.

ಭಾರತೀಯ ವೈದ್ಯಕಿಯ ಸಂಘ (ಐ.ಎಂ.ಎ) ಉಡುಪಿ ಕರಾವಳಿ ಅಧ್ಯಕ್ಷ ಡಾ.ಕೆ ಸುರೇಶ್​ ಶೆಣೈ ಮಾತನಾಡಿ, ಡಾ.ಮಹಾಂತ ಶಿವಯೋಗಿ ಸ್ವಾಮೀಜಿಗಳು 1975 ರಲ್ಲಿ ಜೋಳಿಗೆ ಅಭಿಯಾನದ ಮೂಲಕ ಜನರಲ್ಲಿದ್ದ ದುಶ್ಚಟಗಳನ್ನು ಭಿಕ್ಷೆಯ ರೀತಿಯಲ್ಲಿ ಜೋಳಿಗೆಗೆ ಹಾಕಿಸಿಕೊಂಡು ಅವರಲ್ಲಿ ಮನ@ಪರ್ರಿತಿಸಿ, ಪ್ರತಿಜ್ಞೆ ಪಡೆದು ದುಶ್ಚಟಗಳಿಂದ ದೂರ ಉಳಿಯುವಂತೆ ಮಾಡಿದ್ದರು. ಯುವಜನರು ಆರಂಭದಲ್ಲಿ ತಮ್ಮ ಸ್ನೇಹಿತರ ಒತ್ತಡಕ್ಕೆ ಮಣಿದು ಅಲ್ಪಪ್ರಮಾಣದಲ್ಲಿ ಅಮಲು ಬರುವಂತಹ ಪದಾರ್ಥಗಳ ಸೇವನೆ ಮಾಡುತ್ತಾರೆ. ನಂತರದ ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ದುಶ್ಚಟಗಳಿಗೆ ದಾಸರಾಗುತ್ತಾರೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್​ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರತ್ನ ಕಾಲೇಜಿನ ಪ್ರಾಂಶುಪಾಲೆ ಡಾ.ಅನಿತಾ ಸಿ.ರಾವ್​ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿಟಿ ಎಜುಕೇಷನ್​ ಟ್ರಸ್ಟ್​ನ ಆಡಳಿತ ಅಧಿಕಾರಿ ರವಿಪಾಲನ್​, ವಿದ್ಯಾರತ್ನ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಂ.ಕೆ ರಮೇಶ್​ ಮತ್ತಿತರರು ಉಪಸ್ಥಿತರಿದ್ದರು. ಸಹಾಯಕ ಉಪನ್ಯಾಸಕಿ ಶ್ರೀಲತಾ ನಿರೂಪಿಸಿ, ರಂಜಿತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net