ಮಹರ್ಷಿ ಆದರ್ಶ ಮಾದರಿ

7Athani1
Published on

ಅಥಣಿ: ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ನಮ್ಮೆಲ್ಲರ ಬದುಕಿಗೆ ದಾರಿದೀಪ ಎಂದು ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಹೇಳಿದರು.

ಇಲ್ಲಿನ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಕಾರ್ಯಾಲಯದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಾಲ್ಮೀಕಿ ಅವರ ಆದರ್ಶಗಳು ಮಾನವಕುಲಕ್ಕೆ ಮಾದರಿ ಎಂದರು.

ತಹಸೀಲ್ದಾರ್ ಸಿದರಾಯ ಭೋಸಗಿ ಮಾತನಾಡಿ, ವಾಲ್ಮೀಕಿ ಅವರನ್ನು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಎಲ್ಲರೂ ಒಗ್ಗಟ್ಟಿನಿಂದ ಜಯಂತಿ ಆಚರಿಸಿ ಅವರ ಕೊಡುಗೆಯನ್ನು ಸ್ಮರಿಸಬೇಕು ಎಂದು ಹೇಳಿದರು.

ಉಪನ್ಯಾಸಕ ಸಂಗಮೇಶ ಹಚಡದ ಮಾತನಾಡಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಉತ್ತೀರ್ಣರಾದ ವಾಲ್ಮೀಕಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಅಧಿಕಾರಿಗಳಾದ ಶಿವಾನಂದ ಕಲ್ಲಾಪುರ, ಅಶೋಕ ಗುಡಿಮನಿ, ಎಂ.ಆರ್.ಮುಂಜೆ, ಎಂ.ಎಸ್.ಹುಂಡೆಕಾರ, ಎಂ.ಎನ್.ನಾಮದಾರ, ಪರಶುರಾಮ ಪತ್ತಾರ, ಸಿ.ಟಿ.ಬಡಕಂಬಿ, ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ, ಸದಸ್ಯ ಬಸವರಾಜ ನಾಯಿಕ, ಗಣ್ಯರಾದ ಬಾಬು ಹುಲ್ಯಾಳ, ಸಿದ್ದಾರ್ಥ ಸಿಂಗೆ, ಎ.ಎಚ್.ಮುಜಾವರ, ಓಗೆಪ್ಪ ಅರಟಾಳ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net