ಮಹರ್ಷಿ ವಾಲ್ಮೀಕಿ ನಿತ್ಯ ಸ್ಮರಣೀಯರು

ಗಂಗಾವತಿಯ ವಿರುಪಾಪುರದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯಲ್ಲಿ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕಾಧ್ಯಕ್ಷ ವೀರಭದ್ರಪ್ಪ ನಾಯಕ, ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ ಇತರರಿದ್ದರು.
ಗಂಗಾವತಿಯ ವಿರುಪಾಪುರದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯಲ್ಲಿ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕಾಧ್ಯಕ್ಷ ವೀರಭದ್ರಪ್ಪ ನಾಯಕ, ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ ಇತರರಿದ್ದರು.
Published on

ಗಂಗಾವತಿ: ನಗರದ ವಿರುಪಾಪುರದ ಬಸವಣ್ಣ ದೇವಾಲಯ ಆವರಣದಲ್ಲಿ ವಾಲ್ಮೀಕಿ ನಾಯಕ ಸಮಾಜದಿಂದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಸೋಮವಾರ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಮಹರ್ಷಿಗಳ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಶ್ರೀರಾಮ ಮಂದಿರದಿಂದ ವಿರುಪಾಪುರದ ದೇವಾಲಯದವರೆಗೆ ನಡೆಸಲಾಯಿತು. ಕುಂಭ, ಕಳಸ ಹಾಗೂ ವಾದ್ಯಮೇಳಗಳು ಮೆರವಣಿಗೆಗೆ ಮೆರುಗು ನೀಡಿದವು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಾಜಿ ಎಂಎಲ್‌ಸಿ ಎಚ್.ಆರ್.ಶ್ರೀನಾಥ ಮಾತನಾಡಿ, ವಿಶ್ವಕ್ಕೆ ಶ್ರೇಷ್ಠ ರಾಮಾಯಣ ಕಾವ್ಯ ನೀಡಿದ ವಾಲ್ಮೀಕಿ ನಿತ್ಯ ಸ್ಮರಣೀಯರು. ಅವರ ಕಾವ್ಯದಲ್ಲಿರುವ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.

ದೇವಾಲಯದ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕಾಧ್ಯಕ್ಷ ವೀರಭದ್ರಪ್ಪ ನಾಯಕ ಮಾತನಾಡಿ, ಪರಿಶಿಷ್ಟ ಪಂಗಡದ ಮೀಸಲಾತಿಯಲ್ಲಿ ಅನ್ಯ ಸಮುದಾಯದವರನ್ನು ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಯತ್ನಿಸುತ್ತಿರುವ ಕ್ರಮವು ಖಂಡನೀಯ ಎಂದರು. ಕಾರ್ಯಕ್ರಮದಲ್ಲಿ ರಾಜವಂಶಸ್ಥೆ ಲಲಿತರಾಣಿ ರಾಯಲು, ನಗರಸಭೆ ಮಾಜಿ ಅಧ್ಯಕ್ಷ ಜೋಗದ ಹನುಮಂತಪ್ಪ ನಾಯಕ, ಮುಖಂಡರಾದ ಮಹಾದೇವಪ್ಪ ನಾಯಕ, ದುರುಗಪ್ಪ ನಾಯಕ, ದೇವಪ್ಪ ನಾಯಕ, ಆಗೋಲಿ ಶರಣಪ್ಪ, ಪಂಪಣ್ಣ ನಾಯಕ, ವಿರೂಪಾಕ್ಷಪ್ಪ ನಾಯಕ, ಚಕ್ರವರ್ತಿ ನಾಯಕ, ಯಮನೂರಪ್ಪ ನಾಯಕ, ರಾಮಾನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net