17ರಂದು ಮಹರ್ಷಿ ವಾಲ್ಮೀಕಿ ದಿನಾಚರಣೆ

Maharshi Valmiki Day on 17th
Published on

ವಿಜಯಪುರ : ಜಿಲ್ಲಾಡಳಿತ, ಜಿ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅ. 17 ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 9.30 ಕ್ಕೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ಲ ರಂಗಮಂದಿರವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ನಂತರ ಬೆಳಗ್ಗೆ 11 ಕ್ಕೆ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ, ನವದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಗಮದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿಪ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್​. ಪೂಜಾರಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಪಾಲಿಕೆ ಮೇಯರ್​ ಮಹೇಜಬಿನ ಹೊರ್ತಿ, ವಿಡಿಎ ಅಧ್ಯಕ್ಷ ಕನಾನ್​ ಮುಶ್ರೀಫ್​ ಭಾಗವಹಿಸಲಿದ್ದು, ಸಾಹಿತಿ ಅಶೋಕ ಹಂಚಲಿ ಅವರು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net