

ಮೈಸೂರು: ನಗರದ ತಾಲೂಕು ಕಚೇರಿ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಒತ್ತಾಯಿಸಿದ್ದಾರೆ.
ನಗರದ ಕಲಾಮಂದಿರದಲ್ಲಿ ಇತ್ತೀಚೆಗೆ ನಡೆದ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನಮಗೆ ನೀಡಿರುವ ಹಕ್ಕುಗಳಿಗಾಗಿ ನಾವು ಹೋರಾಡಬೇಕಾದ ಅನಿರ್ವಾತೆ ಇದೆ.
ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು 250 ದಿನ ಧರಣಿ ಮಾಡಿದ್ದರಿಂದ ಹಾಗೂ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಸರ್ಕಾರ ಹೆದರಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ಸಚಿವ ಸಂಪಟದಲ್ಲಿ ಒಪ್ಪಿಗೆ ನೀಡಿದೆ. ಸರ್ಕಾರ ಕೂಡಲೇ ಕೇಂದ್ರ ರ್ಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯ ೇಕು ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ನೀಡಿರುವ ಅನುದಾನವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಮೂರು ಸಾವಿರ ವರ್ಷಗಳ ಹಿಂದೆ ರಾಮಾಯಣ ಬರೆದಿರುವ ಮಹರ್ಷಿ ವಾಲ್ಮೀಕಿಯನ್ನು ನಾವೆಲ್ಲರು ಸ್ಮರಿಸಿಕೊಳ್ಳುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊ ್ಳಬೇಕು ಎಂದರು.