ಮಹಾಸಭಾ ಪದಾಧಿಕಾರಿಗಳ ಪದಗ್ರಹಣ

dr. sanjay kapatkar
Published on

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಖಿಲ ಭಾರತ ಭಾವಸಾರ ಕ್ಷತ್ರಿಯ ಮಹಾಸಭಾದ ಕರ್ನಾಟಕ ಕಾರ್ಯಕಾರಿ ಸಭೆಯಲ್ಲಿ ರಾಜ್ಯ, ಜಿಲ್ಲೆ ಮತ್ತು ವಲಯ ಮಟ್ಟದ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಹುಬ್ಬಳ್ಳಿಯವರಾದ ಡಾ. ಸುರೇಶ ಕಪಟಕರ ರಾಜ್ಯ ಉಪಾಧ್ಯಕ್ಷರಾಗಿ, ಪ್ರಕಾಶ ಇಜಂತಕರ ಹು-ಧಾ ವಲಯ ಅಧ್ಯಕ್ಷರಾಗಿ ಹಾಗೂ ಜಗದೀಶ ಹಂಚಾಟೆ ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಭಾವಸಾರ ಕ್ಷತ್ರಿಯರಿಗೆ ಪ್ರತ್ಯೇಕ ನಿಗಮ ಮಂಡಳಿ ರಚಿಸಬೇಕು. ಭಾವಸಾರ ಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ವಿುಸಲು ಹಾಗೂ ಸಮುದಾಯದ ಅಭಿವೃದ್ಧಿ ಕಾರ್ಯಕ್ಕೆ ನಿರ್ದಿಷ್ಟ ಜಾಗ ಕಲ್ಪಿಸಿ ಕೊಡಬೇಕು, ಗುರುಪೀಠ ಸ್ಥಾಪನೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಸಮಾಜದ ಮುಖಂಡರು ಮನವಿ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net