ಮೋದಿ ಸೋಲಿಸಲು ಮಹಾಘಟಬಂಧನ್

mkg
Published on

ನ್ಯಾಮತಿ: ಇಪ್ಪತ್ತಾರು ಪಕ್ಷಗಳು ಒಟ್ಟಿಗೆ ಸೇರಿ ಮಹಾಘಟಬಂಧನ್ ರಚನೆ ಮಾಡಿಕೊಂಡಿದ್ದು, ಇವರಿಗೆ ಯಾವುದೇ ಸಿದ್ಧಾಂತ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದೇ ಇವರ ಅಜೆಂಡಾ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಹಾಸಂಪರ್ಕ ಅಭಿಯಾನದ ಅಡಿಯಲ್ಲಿ ಅವರು ನೀಡಿದ ಕೊಡುಗೆ ಮತ್ತು ಸಾಧನೆಗಳ ಕರಪತ್ರಗಳನ್ನು ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ವಿತರಿಸಿ ಅವರು ಮಾತನಾಡಿದರು.

ಜಿಪಂ, ತಾಲೂಕು ಪಂಚಾಯಿತಿ ಚುನಾವಣೆ ಯಾವುದೇ ಸಂದರ್ಭದಲ್ಲಿ ಬಂದರೂ ಅದನ್ನು ಎದುರಿಸಲು ನಾವು ಸನ್ನದ್ಧರಾಗಿರಬೇಕು ಎಂದರು.
ಮುಂಖಡರಾದ ಸದಾಶಿವಪ್ಪ, ಹಾಲೇಶ್ ಗುಡೇಮನೆ, ಸಿದ್ದಲಿಂಗಪ್ಪ, ಶಿವಾನಂದಪ್ಪ, ಕುಮಾರ್, ರುದ್ರೇಶ್, ಮಧು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net