

ರಾಣೆಬೆನ್ನೂರ: ತಾಲೂಕಿನ ಕುಮಾರಪಟ್ಟಣಂ ಗ್ರಾಮದಲ್ಲಿ ಆದಿಕವಿ ಶ್ರೀ ಮಹಷಿರ್ ವಾಲ್ಮೀಕಿ ಪುತ್ಥಳಿ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಮೇ 16ರಂದು ನಡೆಯಲಿದೆ ಎಂದು ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಚಂದ್ರಣ್ಣ ಬೇಡರ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ತಾಲೂಕಿನ ಕವಲೆತ್ತು, ನಲವಾಗಲ, ಕೋಡಿಯಾಲ ಹೊಸಪೇಟೆ ಗ್ರಾಮಗಳ ಮಹಿಳೆಯರಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಕುಂಭಮೇಳ ಹೊರಟು ವಾಲ್ಮೀಕಿ ವೃತ್ತಕ್ಕೆ ಆಗಮಿಸುವುದು ಎಂದರು.
ಬೆಳಗ್ಗೆ 9ಕ್ಕೆ ಶ್ರೀ ಮಹಷಿರ್ ವಾಲ್ಮೀಕಿ ಪುತ್ಥಳಿ ಲೋಕಾರ್ಪಣೆ ಹಾಗೂ ಕಳಸಾರೋಹಣವು ನಡೆಯುವುದು. ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ವಹಿಸುವರು. ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕೊಡಿಯಾಲ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ, ಐರಣಿ ಹೊಳಿಮಠದ ಬಸವರಾಜ ದೇಶಿಕೇಂದ್ರ ಸ್ವಾಮೀಜಿ, ನರಸೀಪುರ ನಿಜಶರಣ ಅಂಬಿಗರ ಚೌಡಯ್ಯನವರ ಗುರು ಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಮ್ಮುಖ ವಹಿಸುವರು.
ಸಚಿವರಾದ ಸತೀಶ ಜಾರಕಿಹೊಳಿ, ಕೆ.ಎನ್. ರಾಜಣ್ಣನವರ, ಸಂಸದ ಬಸವರಾಜ ಬೊಮ್ಮಾಯಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಆರ್. ಶಂಕರ, ಬಿ. ಶ್ರೀರಾಮುಲು, ರಾಜು ಗೌಡರು, ಬಿ.ಪಿ. ಹರೀಶ ಸೇರಿದಂತೆ ಮತ್ತಿತರರು ಗಣ್ಯರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಸಮಾಜದ ಪ್ರಮುಖರಾದ ರವೀಂದ್ರಗೌಡ ಪಾಟೀಲ, ಕರಬಸಪ್ಪ ಕೂಲೇರ, ಶಿವಕುಮಾರ ಓಲೇಕಾರ, ಮೌನೇಶ ತಳವಾರ, ಹರಿಹರಗೌಡ ಪಾಟೀಲ, ರಾಘು ಕಮ್ಮಾರ, ಸದಾಶಿವ ಎರೇಶೀಮಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.