ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Gandhiji
Published on

ಬೆಂಗಳೂರು: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಗೆ ಪ್ರಸಕ್ತ ಸಾಲಿನಲ್ಲಿ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನ ಆಹ್ವಾನಿಸಲಾಗಿದೆ.

ಪ್ರಶಸ್ತಿಯು ಐದು ಲಕ್ಷ ರೂ. ನಗದು ಒಳಗೊಂಡಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ 60 ವರ್ಷ ಮೇಲ್ಪಟ್ಟ ವ್ಯಕ್ತಿ ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಸಮಿತಿ ರಚಿಸಲಿದ್ದು, ಆಯ್ಕೆಯಾದ ಪುರಸ್ಕೃತರಿಗೆ ಅ. 2ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇತರರು ನಾಮನಿರ್ದೇಶನ ಕೂಡ ಮಾಡಬಹುದಾಗಿದ್ದು, ಸೆ. 19 ಕೊನೆಯ ದಿನವಾಗಿದೆ.

ವಿಳಾಸ: ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : informationdiprawardsgmail.com ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net