ಮನುಕುಲಕ್ಕೆ ಬದುಕಿನ ಮೌಲ್ಯ ಕಲ್ಪಿಸಿದ ಮಹಾತ್ಮ

blg 17 valmiki
ಬೀಳಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಹಣಮಂತ ಆರ್. ನಿರಾಣಿ ಉದ್ಘಾಟಿಸಿದರು. ತಹಸೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಇಒ ಅಭಯಕುಮಾರ ಮೊರಬ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ ಇದ್ದರು.
Published on

ಬೀಳಗಿ: ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿ ಮನುಕುಲಕ್ಕೆ ಬದುಕಿನ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾನ್ ಕವಿ ಮಹರ್ಷಿ ವಾಲ್ಮೀಕಿ ಎಂದು ವಿಧಾನಪರಿಷತ್ ಶಾಸಕ ಹಣಮಂತ ಆರ್.ನಿರಾಣಿ ಹೇಳಿದರು.

ಸ್ಥಳೀಯ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿಯವರು ಇವತ್ತಿಗೂ ನಮ್ಮ ಕಣ್ಣುಮುಂದೆ ನಿಲ್ಲುತ್ತಾರೆ. ಐದು ಸಾವಿರ ವರ್ಷಗಳ ಹಿಂದೆ ಆದ ಇತಿಹಾಸ ನಮ್ಮ ಭಾರತದ ಸಂಸ್ಕೃತಿ, ಪರಂಪರೆ ಎಲ್ಲಿ ಸಿಗುತ್ತದೆವೆ ಎಂದರೆ ರಾಮಾಯಣ ಎಂಬ ಶ್ರೇಷ್ಠ ಗಂಥದಲ್ಲಿ ಎಂದರಲ್ಲದೆ, ಸಮಾಜಬಾಂಧವರು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಸರ್ಕಾರದ ಸೌಲಭ್ಯ ಪಡೆದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ರಂಗದಲ್ಲಿ ಮುಂದೆ ಬರಬೇಕಾದರೆ ಶಿಕ್ಷಣದ ಅರಿವು ಅತಿ ಮುಖ್ಯವಾಗಿದೆ ಎಂದರು.

ಬೆಳಗಾವಿ ವಿಭಾಗೀಯ ಕರ್ನಾಟಕ ರಾಜ್ಯ ದಲಿತ ಸಮಿತಿ ಅಧ್ಯಕ್ಷ ಮಹಾದೇವ ಹಾದಿಮನಿ ಉಪನ್ಯಾಸ ನೀಡಿ, ಮಹರ್ಷಿ ವಾಲ್ಮೀಕಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಿಚಾರಗಳನ್ನು ನಮ್ಮ ಜೀವನದ ಬದುಕಿನುದ್ದಕ್ಕೂ ಅಳವಡಿಸಿಕೊಂಡು ಮುನ್ನಡೆಯಬೇಕಿದೆ ಎಂದರು.

ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ತಹಸೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಇಒ ಅಭಯಕುಮಾರ ಮೊರಬ, ಬಿಇಒ ಎಸ್.ಆರ್. ಆದಾಪೂರ, ಕೃಷ್ಣಾ ಮೇಲ್ದಂಡೆ ಯೋಜನೆಯ ಬೀಳಗಿ ಎಸ್.ಎಲ್‌ಒ ಉದಯ ಕುಂಬಾರ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಸಮಾಜ ಕಲ್ಯಾಣಾಧಿಕಾರಿ ಸಿ.ಎಸ್. ಗಡ್ಡದೇವರಮಠ, ಸಿಪಿಐ ಬಸವರಾಜ ಹಳಬನ್ನವರ, ಸಿಡಿಪಿಒ ಬಿ.ಜಿ. ಕವಟೇಕರ, ವಾಲ್ಮೀಕಿ ಸಮಾಜ ತಾಲೂಕು ಅಧ್ಯಕ್ಷ ಟಿ.ವೈ. ಜಾನಮಟ್ಟಿ, ವೀರ ಸಿಂಧೂರ ಲಕ್ಷ್ಮಣ ಟ್ರಸ್ಟ್ ಸಮಿತಿ ಅಧ್ಯಕ್ಷ ಶಂಕರ ತಳವಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net