ಮಹಾವೀರ ಜೈನ್‌ಗೆ ಪಿಎಚ್.ಡಿ ಪದವಿ

New Project (4)
Published on

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿಯವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದಾರೆ. ಉಜಿರೆಯ ಡಾ.ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ.ಸಂಪತ್ ಕುಮಾರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ‘ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಹಾವೀರ ಜೈನ್ ಅವರನ್ನು ಸಂಸ್ಥೆಯ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿ ಡಿ.ಹರ್ಷೇದ್ರ ಕುಮಾರ್, ಡಾ.ಸತೀಶ್ಚಂದ್ರ ಎಸ್. ಹಾಗೂ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net