ಮಹಾವೀರ ಜಯಂತಿ ಆಚರಣೆ

udp-4-mahavira
Published on

ಉಡುಪಿ: ಪ್ರಕೃತಿ ಸಕಲ ಜೀವಿಗಳಿಗೂ ಬದುಕು ಹಕ್ಕನ್ನು ನೀಡಿದೆ. ಜೀವನದಲ್ಲಿ ಮಹಾವೀರರ ಐದು ಪಂಚ ತತ್ವಗಳಾದ ಸತ್ಯ, ಅಹಿಂಸೆ, ಅಪರಿಗ್ರಹ, ಆಚೌರ್ಯ ಮತ್ತು ಬ್ರಹ್ಮಚರ್ಯ ಪಾಲಿಸಿದಾಗ ಪ್ರಕೃತಿಗೆ ಪೂರಕ ಮಾನವ ಧರ್ಮ ಸಮಾಜದಲ್ಲಿ ನೆಲೆಗೊಳ್ಳುತ್ತದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಭಗವಾನ್ ಮಹಾವೀರರು ಶಾಂತಿ ಸೌಹಾರ್ದತೆಯನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯಗಳು ಸುಧಾರಿಸಲು ಮಾರ್ಗದರ್ಶನವನ್ನು ನೀಡಿದ್ದಾರೆ. ಅವುಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೆಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಸುರೇಂದ್ರ ಅಡಿಗ ಮಹಾವೀರರ ಕುರಿತು ಮಾತನಾಡಿದರು. ಜೈನ ಮಿಲನ್ ಅಧ್ಯಕ್ಷ ದೀಪ ರಾಜೇಶ್, ಸುಧೀರ್ ಜೈನ್, ಕನ್ನಡ ಸಾಹಿತ್ಯ ಪರಿಷತ್‌ನ ರವಿರಾಜ್, ನರಸಿಂಹ ಮೂರ್ತಿ, ಜಿಲ್ಲಾ ಕಾರ್ಮಿಕಾಧಿಕಾರಿ ಕುಮಾರ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಜೈನ್ ಮಿಲನ್ ನ ಪ್ರಸನ್ನ ಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net