

ಮೈಸೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾನುವಾರ ಕಲಾಮಂದಿರದ ಸುಚಿತ್ರ ಗ್ಯಾಲರಿಯಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಸಮುದಾಯದ ಮುಖಂಡರು ಸೇರಿದಂತೆ ಅನೇಕ ಗಣ್ಯರು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಮುಖಂಡರಾದ ಸುರೇಶ್ ಕುಮಾರ್ ಜೈನ್, ಸಂತೋಷ್, ಸುರೇಶ್ ಜೈನ್, ಮನ್ವಿತ್ ರಾಜ್, ಶೀಲಾ ಅನಂತ್ ರಾಜ್, ಸುನಿಲ್‌ಕುಮಾರ್ ಜೈನ್ ಇತರರಿದ್ದರು.