ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಯಾಗ ಸಂಪನ್ನ: ಎರಡು ದಿನ ವಿವಿಧ ಧಾರ್ಮಿಕ ಕೈಂಕರ್ಯ

Mahayaga at Kalikamba Temple Mandya
Published on

ಮಂಡ್ಯ: ನಗರದ ಕಾಳಿಕಾಂಬ ದೇವಾಲಯದಲ್ಲಿ ಬುಧವಾರ 19ನೇ ವರ್ಷದ ನವಚಂಡಿಕಾ ಮಹಾಯಾಗ ನಡೆಯಿತು.

ಕಾಳಿಕಾಂಬ ದೇವಸ್ಥಾನ ಸಮಿತಿ ವತಿಯಿಂದ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಂಗಳವಾರ ಸಂಜೆಯಿಂದಲೇ ಸಾಮೂಹಿಕ ದೇವತಾ ಪ್ರಾರ್ಥನೆ, ಗುರುಗಣಪತಿ ಪೂಜೆ, ಪುಣ್ಯಾಹ ವಾಚನ, ನವಚಂಡಿಕಾ ಪಾರಾಯಣ ಹಾಗೂ ಮಹಾಸುದರ್ಶನ ಹೋಮ ನಡೆಯಿತು. ರಾತ್ರಿ 8 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.

ಬುಧವಾರ ಬೆಳಗ್ಗೆ ಕಾಳಿಕಾಂಬ ದೇವಿಯ ಸನ್ನಿಧಿಯಲ್ಲಿ ಫಲ ಪಂಚಾಮೃತ ಸಹಿತ ನವಕಳಶಾಭಿಷೇಕ, ನವಚಂಡಿಕಾ ಮಹಾಯಾಗ ಪ್ರಾರಂಭವಾಯಿತು. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಮಹಾಮಂಗಳಾರತಿ, ಪೂರ್ಣಾಹುತಿ, ಸುವಾಸಿನಿ, ಕನ್ನಿಕಾ ಪೂಜೆ, ಶ್ರೆ ದೇವಿಯ ಮೂಲ ಸನ್ನಿಧಿಯಲ್ಲಿ ಮಹಾನೈವೇದ್ಯ ಸಮರ್ಪಣೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಬಲಮುರಿ ಮಹಾಗಣಪತಿ ದೇವಸ್ಥಾನದ ಅರ್ಚಕ ಅರ್ಚುನ್ ಎಸ್. ರಾವ್ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಶಾಸಕ ರವಿಕುಮಾರ್ ಗಣಿಗ, ದೇವಾಲಯ ಸಮಿತಿ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಕಾರ್ಯದರ್ಶಿ ಎಂ.ಎಸ್.ಶ್ರೀನಿವಾಸಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net