ಮಹಾಯೋಗಿ ವೇಮನ ಜಯಂತಿ ಜ.19 ರಂದು

BLY- 17 - vemana
Published on

ಬಳ್ಳಾರಿ : ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಫುಟ್‌ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಜ.19 ರಂದು ಬೆಳಗ್ಗೆ 11 ಗಂಟೆಗೆ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸುವರು.

ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕರಾಮ್, ಬಿ.ಎಂ.ನಾಗರಾಜ್, ಜೆ.ಎನ್.ಗಣೇಶ್, ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಪಾಲಿಕೆ ಮೇಯರ್ ಬಿ.ಶ್ವೇತಾ ಅವರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಬೇಡರೆಡ್ಡಿಹಳ್ಳಿಯ ಕನ್ನಡ ಉಪನ್ಯಾಸಕ ಭೀಮರೆಡ್ಡಿ ಎಸ್.ಬಿ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಲಕ್ಷ್ಮೀ ಪವನ್‌ಕುಮಾರ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಪಾಲಿಕೆ ಆಯುಕ್ತ ಜಿ. ಖಲೀಲ್ಸಾಬ್, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net