ಕಾರಂತ ಮನೆತನದ ಶಾಲೆ ಉಳಿಸಲು ಮಾಹೆ ಸಿದ್ಧ

shambhavi
ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್, ಉದ್ಯಮಿ ಸುರೇಶ್ ಪ್ರಭು, ರಮಾನಂದ ಶ್ಯಾನುಭಾಗ್ ಅವರನ್ನು ಸನ್ಮಾನಿಸಲಾಯಿತು.
Published on

ಕೋಟ: ಇತ್ತೀಚಿಗಿನ ವರ್ಷಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿ ಅವಲೋಕಿಸಿದರೆ ತುಂಬಾ ಬೇಸರವಾಗುತ್ತದೆ. ಅದರಲ್ಲೂ ಶತಮಾನ ಕಂಡ ಅದೆಷ್ಟೊ ಶಾಲೆಗಳು ತಮ್ಮ ಉಳಿವಾಗಿ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ, ಕಾರಂತರ ಮನೆತನದ ಶಾಂಭವಿ ಶಾಲೆ ಉಳಿಸಲು ಮಾಹೆ ಸಿದ್ಧವಿದೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ ಹೇಳಿದರು.

ಭಾನುವಾರ ಕೋಟದ ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಹಿರಿಯ ಹಾಗೂ ಪ್ರಸ್ತುತ ಶಿಕ್ಷಕರು, ಗೌರವ ಶಿಕ್ಷಕರನ್ನು ಗೌರವಿಸಲಾಯಿತು. ಹಿರಿಯ ತಲೆಮಾರಿನ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಶಾಲಾ ಆಡಳಿತ ಮಂಡಳಿ ಸಂಚಾಲಕ ಸಚಿನ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸನ್ಮಾನ ನೆರವೇರಿಸಿದರು.

ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್, ಉದ್ಯಮಿ ಸುರೇಶ್ ಪ್ರಭು, ರಮಾನಂದ ಶ್ಯಾನುಭಾಗ್, ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ಜೋಗಿ ಉಪಸ್ಥಿತರಿದ್ದರು. ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಸದಾನಂದ ಗಿಳಿಯಾರು ಶತನೋತ್ಸವ ಮುನ್ನೋಟದ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆ.ರಾಜಾರಾಂ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಲಾ ಮುಖ್ಯಶಿಕ್ಷಕ ದಿವಾಕರ್ ರಾವ್ ಸ್ವಾಗತಿಸಿದರು. ಅತಿಥಿ ಶಿಕ್ಷಕರಾದ ವಿನೋದ ವಿಜಯ್, ಸರಿತಾ ಪ್ರಸಾದ್ ನಿರೂಪಿಸಿ, ವಂದಿಸಿದರು. ನಂತನರ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಪ್ರಹಸನ ವಿವಿಧ ಕಾರ್ಯಕ್ರಮಗಳು ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net