ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ

MAHESH NEW
Published on

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕು. ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಇಲ್ಲಿನ ದೇಶಪಾಂಡೆ ನಗರದಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಸದೃಢವಾಗಿದೆ. ಅನ್ಯ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಒಗ್ಗಟ್ಟಾಗಿ ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸೆಪ್ಟೆಂಬರ್ ಮತ್ತು ಅಕ್ಟೋಬರ್​ನಲ್ಲಿ ಪಕ್ಷ ಹಲವು ಕಾರ್ಯಕ್ರಗಳನ್ನು ಅನುಷ್ಠಾನಗೊಳಿಸಲು ಸೂಚಿಸಿದೆ. ಸೆ. 10 ರ ಒಳಗೆ ರಾಜ್ಯ ಮಟ್ಟದ ಸಾಮಾಜಿಕ ಜಾಲತಾಣದ ಕಾರ್ಯಕರ್ತರ ಸಭೆ, ಜಿಲ್ಲಾ ಸಾಮಾಜಿಕ ಜಾಲತಾಣ ಹಾಗೂ ಐ.ಟಿ ತಂಡದ ಕಾರ್ಯಾಗಾರ ಸೆ.15 ರ ಒಳಗೆ ನಡೆಸುವುದು, ಅ. 8 ರಂದು ವಿಭಾಗ ಮಟ್ಟದ ಕಾರ್ಯಗಾರ ನಡೆಸುವುದು, ಪ್ರಧಾನಮಂತ್ರಿ ಸ್ವ-ನಿಧಿಯಿಂದ ಸುರಕ್ಷಾವರೆಗೆ ‘ಮೇರಿ ಮಾಟಿ-ಮೇರಾ ದೇಶ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಮಾಡಬೇಕಿದೆ ಎಂದು ತಿಳಿಸಿದರು.

ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಪ್ರದೀಪ ಮುಳ್ಳೂರು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಪ್ರಕೋಷ್ಠಗಳ ರಾಜ್ಯ ಸಹ-ಸಂಯೋಜಕ ಜಯತಿರ್ಥ ಕಟ್ಟಿ, ಮಹಾಪೌರರಾದ ವೀಣಾ ಬರದ್ವಾಡ, ಉಪ ಮಹಾಪೌರ ಸತೀಶ ಹಾನಗಲ್, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ಮಂಡಲ ಅಧ್ಯಕ್ಷರಾದ ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಬಸವರಾಜ ಗರಗ, ವಕ್ತಾರ ರವಿ ನಾಯಕ ಈಶ್ವರಗೌಡ ಪಾಟೀಲ, ಸಿದ್ದು ಮೊಗಲಿಶೆಟ್ಟರ, ರಾಧಾಬಾಯಿ ಸಪಾರೆ, ಮೇನಕಾ ಹುರಳಿ, ಪಾಲಿಕೆ ಸದಸ್ಯರು ಹಾಗೂ ಪ್ರಮುಖರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net