ಇಂದಿರಾ ಕ್ಯಾಂಟೀನ್‌ಗೆ ಮಹೇಶ್‌ಕುಮಾರ್ ಭೇಟಿ

ಹನೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಮುಖ್ಯಾಧಿಕಾರಿ ಮಹೇಶ್‌ಕುಮಾರ್ ದಿಢೀರ್ ಭೇಟಿ ನೀಡಿ ಊಟ ಸೇವಿಸಿ ಗುಣಮಟ್ಟ ಪರೀಕ್ಷಿಸಿದರು.
ಹನೂರಿನಲ್ಲಿ ಇಂದಿರಾ ಕ್ಯಾಂಟೀನ್‌ಗೆ ಮುಖ್ಯಾಧಿಕಾರಿ ಮಹೇಶ್‌ಕುಮಾರ್ ದಿಢೀರ್ ಭೇಟಿ ನೀಡಿ ಊಟ ಸೇವಿಸಿ ಗುಣಮಟ್ಟ ಪರೀಕ್ಷಿಸಿದರು.
Published on

ಹನೂರು: ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಗುರುವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್ ದಿಢೀರ್ ಭೇಟಿ ನೀಡಿ ಊಟ ಸವಿಯುವ ಮೂಲಕ ಆಹಾರದ ಗುಣಮಟ್ಟವನ್ನು ಪರೀಕ್ಷಿಸಿದರು.

ಊಟ ಮಾಡುತ್ತಿದ್ದ ಜನರಿಂದ ಆಹಾರದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದ ಬಳಿಕ ಮಾತನಾಡಿ, ಇಂದಿರಾ ಕ್ಯಾಂಟೀನ್‌ನಲ್ಲಿ ಸರ್ಕಾರದ ಮೆನುವಿನಂತೆ ಬೆಳಗಿನ ಉಪಹಾರದ ವೇಳೆ ಇಡ್ಲಿ, ಕೇಸರಿ ಬಾತ್, ಉಪ್ಪಿಟ್ಟು ಮಧ್ಯಾಹ್ನದ ವೇಳೆ ರಾಗಿ ಮುದ್ದೆ, ಅನ್ನ ಸಾಂಬಾರ್ ಚಪಾತಿ ಹಾಗೂ ರಾತ್ರಿ ವೇಳೆ ಅನ್ನ ಸಾಂಬಾರ್ ತಯಾರಿಸಿ ಜನರಿಗೆ ನೀಡಬೇಕು. ಇಲ್ಲಿಗೆ ಬರುವ ಜನರನ್ನು ಪ್ರೀತಿ ವಿಶ್ವಾಸದಿಂದ ಮಾತನಾಡಿಸಬೇಕು. ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು. ಕ್ಯಾಂಟೀನ್‌ನಲ್ಲಿ ಪ್ರತಿ ನಿತ್ಯ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಬಿಸಿನೀರು ನೀಡಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.

ಬಳಿಕ ಅಡುಗೆ ಕೋಣೆಗೆ ತೆರಳಿದ ಮುಖ್ಯಾಧಿಕಾರಿ ಸ್ವಚ್ಛತೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಪ್ರಕಾಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net