ಕಾಂಕ್ರಿಟ್ ರಸ್ತೆ ಕಾಮಗಾರಿ ಚುರುಕಿಗೆ ಶಾಸಕ ಟೆಂಗಿನಕಾಯಿ ಸೂಚನೆ

MAHESH TENGINAKAYI
Published on

ಹುಬ್ಬಳ್ಳಿ : ಉಣಕಲ್ಲನ ಸಾಯಿನಗರ ಮುಖ್ಯರಸ್ತೆ ಸೇರಿದಂತೆ ಮಹಾನಗರ ನಗರ ಪಾಲಿಕೆಯ ಮೂರು ವಾರ್ಡ್​ಗಳಲ್ಲಿನ ಒಳಭಾಗದ ಕಾಂಕ್ರಿಟ್ ರಸ್ತೆಗಳ ಕಾಮಗಾರಿ ಪರಿಶೀಲನೆಯನ್ನು ಶಾಸಕ ಮಹೇಶ ಟೆಂಗಿನಕಾಯಿ ಬುಧವಾರ ನಡೆಸಿದರು.

ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗ, ಮಹಾನಗರ ಪಾಲಿಕೆ, ಜಲಮಂಡಳಿ, ಎಲ್ ಆಂಡ್ ಟಿ ಹಾಗೂ ಹೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಮಹೇಶ ಟೆಂಗಿನಕಾಯಿ, ಸರ್ಕಾರದಿಂದ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡ ಕುರಿತು ಮಾಹಿತಿ ಪಡೆದರು.

ಕಾಂಕ್ರಿಟ್ ರಸ್ತೆ ಕಾಮಗಾರಿ ಶೀಘ್ರ ಪ್ರಾರಂಭಿಸಬೇಕು. ಯಾವುದೇ ರೀತಿಯ ಅಡಚಣೆ ಉಂಟಾದರೆ ತಕ್ಷಣ ಮಾಹಿತಿ ನೀಡಬೇಕು. ಕಾಮಗಾರಿ ಗುಣಮಟ್ಟದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ರಾಜಣ್ಣ ಕೋರವಿ, ತಿಪ್ಪಣ್ಣ ಮಜ್ಜಗಿ, ಉಮೇಶಗೌಡ ಕೌಜಗೇರಿ, ವಲಯ ಸಹಾಯಕ ಆಯುಕ್ತರು, ಇಂಜಿನಿಯರ್​ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net