ಗ್ರಾಮೀಣ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು

Published on

 ಕೊಳ್ಳೇಗಾಲ : ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸುನೀತಾ ಹೇಳಿದರು.

ಪಟ್ಟಣದ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರ ಮತ್ತು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆ ಆಗುತ್ತಿದೆ. ಆದರೆ ದೌರ್ಜನ್ಯ ನಡೆಯುವ ಮುನ್ನವೇ ತಡೆಗಟ್ಟುವಲ್ಲಿ ಸಮಾಜದ ಹೊಣೆಗಾರಿಕೆಯೂ ಇರುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಶಿಕ್ಷಣದ ಪಾತ್ರ ಹಿರಿದಾಗಿದೆ ಎಂದು ಸುನೀತಾ ಸಲಹೆ ನೀಡಿದರು. ಲಯನ್ ಕ್ಲಬ್ ಅಧ್ಯಕ್ಷ ಚಿಕ್ಕಬಸವಯ್ಯ, ನಿಕಟ ಪೂರ್ವ ಅಧ್ಯಕ್ಷ ವೆಂಕಟೇಶ ಬಾಬು, ಮಾಜಿ ಅಧ್ಯಕ್ಷ ಸಲಯನ್ ಎಸ್.ನಾಗರಾಜು, ಕಾರ್ಯದರ್ಶಿ ಇಂದ್ರೇಶ್, ಖಜಾಂಚಿ ವಿರೂಪಾಕ್ಷ ಸ್ವಾಮಿ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net