

ಕಾರ್ಕಳ: ಕುಕ್ಕುಂದೂರು ಅಯ್ಯಪ್ಪ ನಗರ ಗರಡಿ ಬಳಿ ಪರಿಶಿಷ್ಟ ಪಂಗಡದ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯದಲ್ಲಿ ಶಾಮೀಲಾಗಿರುವ ಎಲ್ಲ ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಪೊಲೀಸ್ ಉಪಾಧೀಕ್ಷಕ ಅರವಿಂದ ಕಲಗುಜ್ಜಿಗೆ ಮನವಿ ಸಲ್ಲಿಸಿತು.
ಘಟನೆಯಿಂದ ಸಮಾಜದಲ್ಲಿ ಮಹಿಳೆಯರಿಗೆ ಭಯದ ವಾತಾವರಣ ಉಂಟಾಗಿದ್ದು, ಈ ಜಿಹಾದಿ ಕೃತ್ಯವನ್ನು ಎಸಗಿದವರು ಕ್ರಿಮಿನಲ್ ಹಿನ್ನೆಲೆಯವರಾಗಿರುವ ಸಂಶಯವಿದೆ. ಈ ಪೈಶಾಚಿಕ ಕೃತ್ಯದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಇದೆ. ಹೀಗಾಗಿ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆಗೆ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕೆಂದು ಒತ್ತಾಯಿಸಿದೆ. ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಪ್ರಮುಖರು ಉಪಸ್ಥಿತರಿದ್ದರು.