

ಬೆಂಗಳೂರು: ಮಹಿಳಾ ಯಕ್ಷಗಾನ ತಂಡವೊಂದು 25 ವರ್ಷಗಳ ಕಾಲದಿಂದ ಹೆಜ್ಜೆ ಹಾಕುತ್ತಿರುವುದು ಅಭಿಮಾನದ ಸಂಗತಿ. ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳೆಯರನ್ನು ಒಂದೆಡೆ ಸೇರಿಸಿ ಯಕ್ಷಗಾನ ಕಲಿಸಿ ಕಲೆಯನ್ನು ಉಳಿಸುವುದರೊಂದಿಗೆ ಕನ್ನಡ ಕಂಪನ್ನು ಪಸರಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮುಖ್ಯಮಂತ್ರಿಗಳ ವಾರ್ತಾಧಿಕಾರಿ ಎಂ. ಸಹನಾ ಹೇಳಿದರು.
ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದೆ ಕರ್ನಾಟಕ ಮಹಿಳಾ ಯಕ್ಷಗಾನ ತಂಡದ ರಜತ ಮಹೋತ್ಸವದ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಂಡದ ಕಲಾವಿದೆಯರು ವೀರ ಅಭಿಮನ್ಯು ಮತ್ತು ಭಕ್ತ ಚಂದ್ರಹಾಸ ಎಂಬ ಎರಡು ಯಗಾನ ಪ್ರಸಂಗಗಳನ್ನು ಪ್ರದರ್ಶಿಸಿದರು. ಕಲಾವಿದರಾಗಿ ಕೆ. ಗೌರಿ, ಆಶಾ ರಾವೇಂದ್ರ, ಸುಮಾ ಅನಿಲ್ ಕುಮಾರ್, ಶಶಿಕಲಾ, ಅನ್ನಪೂರ್ಣೇಶ್ವರಿ, ಚೈತ್ರ ಆರ್. ಆಚಾರ್, ಅನುಷಾ ಸುರೇಶ್, ಚೈತ್ರಾ ಭಟ್, ಸೌಜನ್ಯಾ ನಾವುಡ, ದೀಕ್ಷಾ ಭಟ್, ಅಭಿಶ್ರೀ, ಸರಯೂ ವಿಠಲ್, ಕ್ಷಮಾ ಪೈ, ಮಾನ್ಯ, ಪವಿತ್ರ, ಗಗನ, ಸಹನಾ, ಧೃತಿ ಅಮ್ಮೆಂಬಳ ಭಾಗವಹಿಸಿದ್ದರು.
ಹಿಮ್ಮೇಳದಲ್ಲಿ ಸುಬ್ರಹ್ಮಣ್ಯ ನಾವುಡ, ವಿನಯ್ ರಾಜೀವ್ ಶೆಟ್ಟಿ, ಮೃದಂಗದಲ್ಲಿ ಎಂ. ಸಂಪತ್ ಆಚಾರ್ಯ, ಚೆಂಡೆಯಲ್ಲಿ ಸುಬ್ರಹ್ಮಣ್ಯ ಮತ್ತು ನರಸಿಂಹ ಆಚಾರ್ ಇದ್ದರು. ಎರಡೂ ಪ್ರಸಂಗಗಳನ್ನು ಯಕ್ಷ ಗುರುಗಳಾದ ಶೀನಿವಾಸ ಸಾಸ್ತಾನ ಮತ್ತು ಕೆ. ಗೌರಿ ನಿರ್ದೇಶಿಸಿದರು. ಶೀಲಕ್ಷ್ಮಿ ನರಸಿಂಹ ಟ್ರಸ್ಟ್ ಸ್ಥಾಪಕ ಪಿ.ಸಿ. ಮುಕುಂದ ರಾವ್, ರೇವತಿ ಸುರೇಶ್ ಮತ್ತಿತರರಿದ್ದರು.