ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಖಂಡನೆ: ನಗರದಲ್ಲಿ ಮಹಿಳೋದಯ ಮಹಿಳಾ ಒಕ್ಕೂಟದಿಂದ ಪ್ರತಿಭಟನೆ

Mahilodaya Womens Union protest Mandya
Published on

ಮಂಡ್ಯ: ದೇಶದಲ್ಲಿ ಹೆಚ್ಚಾಗುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಖಂಡಿಸಿ ಮಹಿಳೋದಯ ಮಹಿಳಾ ಒಕ್ಕೂಟ ಪ್ರತಿಭಟನೆ ನಡೆಸಿತು. ಸರ್‌ಎಂವಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಒಕ್ಕೂಟದ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಸ್ನಾತಕೋತರ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಉತ್ತರಖಂಡದ ಡೇಹ್ರಾಡೂನ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಸೇರಿದಂತೆ ದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ ಕೊಲೆ, ಲೈಂಗಿಕ ಕಿರುಕುಳ ಪ್ರಕರಣಗಳು ಪ್ರತಿನಿತ್ಯ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಮರಣದಂಡನೆಗೆ ಗುರಿಪಡಿಸಬೇಕು. ಮಹಿಳೆಯರ ಮೇಲೆ ಹೀನ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಉದ್ಯೋಗಸ್ಥ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ವಾತಾವರಣ ನಿರ್ಮಿಸಬೇಕು. ಹೆಣ್ಣು ಮಕ್ಕಳ ವಸತಿ ನಿಲಯಗಳ ಬಳಿ ಸೂಕ್ತ ಭದ್ರತೆ ನೀಡಬೇಕು. ಮಹಿಳೆಯರ ಮೇಲೆ ನಡೆಯುವ ಅಪರಾಧಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ತುರ್ತು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಮೊಲಿ ಪುಡ್ತದೋ, ಭಾರತಿ, ಉಮಾ, ಶೃತಿ, ಪ್ರಕಾಶ್ ಮೇರಿ, ಸಾಕಮ್ಮ, ವರಲಕ್ಷ್ಮೀ, ವಿದ್ಯಾವತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net