ಮಹಿಷ ದಸರಾ ಆಚರಣೆಗೆ ಅವಕಾಶ ನಿರಾಕರಣೆ: ಮೈಸೂರಿನಲ್ಲಿ ಪ್ರತಿಭಟನೆ

Mahisha dasara
Published on

ಮೈಸೂರು: ಮಹಿಷ ದಸರಾ ಆಚರಣೆಗೆ ಅವಕಾಶ ನೀಡದೆ ಇರುವುದನ್ನು ಖಂಡಿಸಿ ಅಶೋಕಪುರಂನ ಅಶೋಕವೃತ್ತದ ಬಳಿ ಸ್ಥಳೀಯ ನಿವಾಸಿಗಳು ಬುಧವಾರ ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಿದರು.

ಸಂವಿಧಾನದಲ್ಲಿ ಪ್ರತಿಯೊಂದು ಧಾರ್ಮಿಕ ಆಚರಣೆಗಳಿಗೂ ಅವಕಾಶ ನೀಡಲಾಗಿದೆ. ಹೀಗಾಗಿರುವ ಮಹಿಷ ದಸರಾ ಆಚರಣೆಗೆ ಅವಕಾಶ ನಿರಾಕರಿಸುವುದು ಸರಿಯಲ್ಲ. 2015 ರಿಂದ ಇದುವರೆಗೆ ಮಹಿಷ ದಸರಾ ಆಚರಿಸಿಕೊಂಡು ಬರುತ್ತಿದ್ದೇವೆ. ಇದುವರೆಗೆ ನಮ್ಮಿಂದ ಶಾಂತಿ ಸುವ್ಯವಸ್ಥೆಗೆ ಯಾವುದೇ ರೀತಿಯ ಭಂಗ ಉಂಟಾಗಿಲ್ಲ. ಆದರೆ, ಇದೀಗ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗುವ ಹೆಸರಿನಲ್ಲಿ ಮಹಿಷ ದಸರಾ ಆಚರಣೆಗೆ ಅನುಮತಿ ನಿರಾಕರಿಸುವುದು ಸರಿಯಲ್ಲ ಎಂಬ ಆಕ್ರೋಶ ವ್ಯಕ್ತವಾಯಿತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net