

ಕಡೂರು: ಡೆಂೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಎಸ್.ಆನಂದ್ ಅಧಿಕಾರಿಗಳಿಗೆ ತಿಳಿಸಿದರು.
ಬುಧವಾರ ತಾಪಂನಲ್ಲಿ ಆಯೋಜಿಸಿದ್ದ ಡೆಂೆ ನಿಯಂತ್ರಣ ಕುರಿತು ಆರೋಗ್ಯ ಇಲಾಖೆ, ಪುರಸಭೆ ಮತ್ತು ಪಿಡಿಒಗಳ ಸಭೆಯಲ್ಲಿ ಮಾತನಾಡಿ, ಪಟ್ಟಣದಲ್ಲಿ ಎಲ್ಲಿಯೂ ಕಸ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಗ್ರಾಪಂಗಳು ಪ್ರತಿ ಗ್ರಾಮದಲ್ಲಿ ಫಾಗಿಂಗ್ ಮಾಡಿಸಬೇಕು. ಅವಶ್ಯಕತೆ ಬಿದ್ದರೆ ಫಾಗಿಂಗ್ ಮಷಿನ್‌ಗಳನ್ನು ಖರೀದಿಸಬೇಕು. ತಾಪಂ ಇಒ ಇದಕ್ಕೆ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.
ತಾಪಂ ಇಒ ಸಿ.ಆರ್.ಪ್ರವೀಣ್ ಮಾತನಾಡಿ, ಚರಂಡಿಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛಗೊಳಿಸಲಾಗಿದೆ. ಲಾರ್ವಾ ಸಮೀಕ್ಷೆ ಕೈಗೊಳ್ಳಲಾಗಿದೆ. ಫಾಗಿಂಗ್ ಮಷಿನ್ ಖರೀದಿಸಲು ಗ್ರಾಪಂಗಳಿಗೆ ಆದೇಶಿಸಲಾಗುವುದು ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಸ್.ಸಿ.ರವಿಕುಮಾರ್ ಮಾತನಾಡಿ, 1128 ಶಂಕಿತ ಡೆಂೆ ಪ್ರಕರಣಗಳ ಪೈಕಿ 262 ಜನರ ರಕ್ತದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 40 ಜನರಲ್ಲಿ ಡೆಂೆ ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಗಳಲ್ಲಿ 381 ಮಂದಿಯಲ್ಲಿ 18 ಜನರಲ್ಲಿ ರೋಗ ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡವರಿಗೆ ಕಡ್ಡಾಯವಾಗಿ ಡೆಂೆ ಮತ್ತು ಮಲೇರಿಯಾ ಪರೀಕ್ಷೆ ನಡೆಸಲಾಗುತ್ತದೆ. ಪ್ರತಿ ಮನೆಗೂ ಭೇಟಿ ನೀಡಿ ಡೆಂೆ ತಡೆಗೆ ಅರಿವು ಮೂಡಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಪಿಡಿಒಗಳು ಆರೋಗ್ಯ ಇಲಾಖೆ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜೂನ್‌ನಲ್ಲಿ 32 ಡೆಂೆ ಜ್ವರ ಪ್ರಕರಣ, ಜುಲೈನಲ್ಲಿ 27 ಡೆಂೆ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 702 ಡೆಂೆ ಪರೀಕ್ಷೆ ನಡೆಸಲಾಗಿತ್ತು, 76 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ಎನ್.ಉಮೇಶ್ ಹೇಳಿದರು.
ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು, ಪಿಡಿಒಗಳು ಮತ್ತು ಪುರಸಭೆ ಆರೋಗ್ಯ ಸಿಬ್ಬಂದಿ ಇದ್ದರು.