

ಚನ್ನರಾಯಪಟ್ಟಣ: ದೇಶದ ಐಕ್ಯತೆ, ಸಮಗ್ರತೆ ಕಾಪಾಡಿಕೊಂಡು ದೇಶವನ್ನು ಮುನ್ನಡೆಸುವ ಗುರುತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಡಾ.ಸಿ.ಎನ್.ಬಾಲಕೃಷ್ಣ ತಿಳಿಸಿದರು.
ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಹಬ್ಬಗಳ ಆಚರಣೆಯ ಸಮಿತಿ ವತಿಯಿಂದ ಆಚರಿಸಲಾದ 78ನೇ ಸ್ವಾತಂತ್ರ್ಯ ದಿನಾಚರಣೆ ಮಹೋತ್ಸವದಲ್ಲಿ ಮಾತನಾಡಿದ ಅವರು, ಹಲವಾರು ಮಹಾತ್ಮರ ತ್ಯಾಗ, ಬಲಿದಾನದ ಫಲವಾಗಿ ದೇಶವು ಸ್ವತಂತ್ರವಾಗಿ, ಅಭಿವೃದ್ಧಿಯ ಪಥದಲ್ಲಿ ದಾಪುಗಾಲಿಟ್ಟು, ಇಂದು ಪ್ರಪಂಚದಲ್ಲೇ ಬಲಾಢ್ಯ ಅರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದರು.
ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಇದೇ ವೇಳೆ ಲ್ಯಾಪ್‌ಟಾಪ್ ವಿತರಿಸಲಾಯಿತು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು. ನಂತರ ವಿವಿಧ ಶಾಲೆಗಳಿಂದ ದೇಶಭಕ್ತಿ ಸಾರುವ ಕುರಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ತಹಸೀಲ್ದಾರ್ ವಿ.ಎಸ್.ನವೀನ್ ಕುಮಾರ್ ಹಾಗೂ ಡಿವೈಎಸ್‌ಪಿಪಿ ರವಿಪ್ರಸಾದ್, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ಜಿ. ಆರ್.ಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷೆ ಚಂದ್ರಕಲಾ ಮಂಜೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಮಂಜಪ್ಪ, ಕಸಾಪ ತಾ.ಅಧ್ಯಕ್ಷ ಎಚ್.ಎನ್.ಲೋಕೇಶ್, ನಾಗೇಶ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಕೆ.ನಾಗೇಶ್, ಪರಿಸರ ಪ್ರೇಮಿ ಚ.ನಾ.ಅಶೋಕ್, ಬಿಇಒ ಎಚ್.ಎನ್.ದೀಪಾ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಿ.ಮಹೇಶ್, ದೈಹಿಕ ಪರಿವೀಕ್ಷಕ ಆನಂದ್, ತಾಪಂ ಸಿಇಒ ಜಿ.ಆರ್.ಹರೀಶ್, ಪುರಸಭೆ ಸಿಒ ಕೆ.ಎನ್. ಹೇಮಂತ್, ನಗರ ಠಾಣಾ ವೃತ್ತ ನಿರೀಕ್ಷಕ ರಘುಪತಿ ಭಟ್, ಪುರಸಭಾ ಸದಸ್ಯರು, ಇತರರಿದ್ದರು.