ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ: ವೆಂಕಟ್ ರಾಜಾ

svachatha abiyana
Published on

ಮಡಿಕೇರಿ: ಪರಿಸರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.


ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಗಿಡ ನೆಡುವ ಮೂಲಕ ಸ್ಚಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.


ಪ್ರತಿ ವರ್ಷದಂತೆ ಈ ವರ್ಷವೂ ಸಹ ಸ್ವಚ್ಛತಾಹೀ ಸೇವಾ ಪಾಕ್ಷಿಕವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆ.೧೭ ರಿಂದ ಅ.೨ರ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಘೋಷ ವಾಕ್ಯದೊಂದಿಗೆ ಈ ಬಾರಿಯ ಸ್ವಚ್ಛತಾಹೀ ಸೇವಾ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ತಿಳಿಸಿದರು.


ಕೊಡಗು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಈ ಅಭಿಯಾನವೂ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಗೆ ಅನುಕೂಲ ಮಾಡಿಕೊಡುತ್ತದೆ. ಎಲ್ಲೆಂದರಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಮುದಾಯದ ಭಾಗವಹಿಸುವಿಕೆಯೊಂದಿಗೆ ಸದರಿ ಸ್ಥಳವನ್ನು ಸ್ವಚ್ಛ ಗೊಳಿಸಲಾಗುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಜೊತೆಗೆ ಈ್ ರೀತಿಯಾಗಿ ಅಕ್ರಮವಾಗಿ ತ್ಯಾಜ್ಯ ಸುರಿಯುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.


ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಿ.ಧನರಾಜು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.


ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ಜಿಲ್ಲಾ ಅಗ್ರಣಿ ಬ್ಯಾಂಕ್‌ನ ವ್ಯವಸ್ಥಾಪಕ ಗಂಗಾಧರ್ ನಾಯಕ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಸಮಾಲೋಚಕರಾದ ಹರ್ಷಿತ, ಪೆಮ್ಮಯ್ಯ, ಸೂರಜ್, ವಾಸುದೇವ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net