ಅಂಚೆಮತಪತ್ರ ಸೌಲಭ್ಯ ಕೇಂದ್ರ 6ರವರೆಗೆ ನಿರ್ವಹಣೆ

DC Photo (2)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದ ಅಂಚೆಮತಪತ್ರ ಸೌಲಭ್ಯ ಕೇಂದ್ರವನ್ನು ಮೇ 6ವರೆಗೆ ನಿರ್ವಹಣೆ ಮಾಡಲಾಗುತ್ತದೆ. ಚುನಾವಣೆ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿಗೆ ಅಂಚೆ ಮತದಾನ ಪ್ರಕ್ರಿಯೆಯನ್ನು ಜಿಲ್ಲಾ ಮಟ್ಟದಲ್ಲಿ ಮೇ 6ರವರೆಗೆ ಮುಂದುವರೆಸಲಾಗುತ್ತದೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಹಸೀಲ್ದಾರ ಕಚೇರಿಯಲ್ಲಿ ಸ್ಥಾಪಿಸಿರುವ ಸೌಲಭ್ಯ ಕೇಂದ್ರವು ಕರ್ತವ್ಯನಿರತ ಅಂಚೆ ಮತಪತ್ರ ಪಡೆದ ವಿವಿಧ ಇಲಾಖೆಗಳ ಸಿಬ್ಬಂದಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net