ಶಾಲಾ ಶೌಚಾಲಯಗಳ ನಿರ್ವಹಣೆಯನ್ನು ಗ್ರಾಪಂ ಮಾಡಬೇಕು

10
Published on

ಮೈಸೂರು: ಸರ್ಕಾರಿ ಶಾಲಾ ಶೌಚಾಲಯಗಳ ನಿರ್ವಹಣೆಯನ್ನು ವಾರದಲ್ಲಿ ಒಮ್ಮೆಯಾದರೂ ಗ್ರಾಮ ಪಂಚಾಯಿತಿಯಿಂದ ಮಾಡಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕರು ಈ ವಿಷಯದಲ್ಲಿ ಕ್ರಮ ವಹಿಸುತ್ತಿಲ್ಲ. ಮಕ್ಕಳ ಕೈಯಲ್ಲಿ ಮಾಡಿಸಿಬಿಡುತ್ತಾರೆ. ಇದು ದೊಡ್ಡ ಸುದ್ದಿಯಾಗುತ್ತದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಹಲವು ಪಿಡಿಒಗಳು ಶಾಲಾ ಶೌಚಾಲಯ ನಿರ್ವಹಣೆಗಾಗಿ ಶಾಲೆಗೆ ಅನುದಾನ ನಿಗದಿಪಡಿಸಿರುವುದನ್ನು ಬಳಸಿಕೊಂಡು ನಿರ್ವಹಣೆ ವಾಡಬೇಕು. ಆಯಾ ಊರಿನಲ್ಲಿ ಇರುವ ಪೌರ ಕಾರ್ಮಿಕರ ಬಳಸಿಕೊಳ್ಳಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ ಮಾಡುವವರಿಗೆ ಇದನ್ನು ವಹಿಸಿದರೆ ಒತ್ತಡ ಬೀಳಲಿದೆ ಎಂದರು.

ಕ್ಷೇತ್ರದ ವ್ಯಾಪ್ತಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ನಿವೇಶನ ಮಂಜೂರಾತಿಗೆ ಪ್ರಸ್ತಾಪ ಸಲ್ಲಿಸಬೇಕು. ಅಧಿವೇಶನದ ವೇಳೆ ಸಚಿವರನ್ನು ಭೇಟಿ ಮಾಡಿ ಮಂಜೂರು ಮಾಡಿಸುವ ಜತೆಗೆ ಕಟ್ಟಡ ನಿರ್ಮಾಣಕ್ಕೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸಲು ಪ್ರಯತ್ನಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net