ಮೆಕ್ಕೆಜೋಳ ಮುರಿಯುತ್ತಿದ್ದ ರೈತ ಹಾವು ಕಚ್ಚಿ ಸಾವು

Crime Logo
Published on

ಬಂಕಾಪುರ: ಜಮೀನಿನಲ್ಲಿ ಮೆಕ್ಕೆಜೋಳ ಮುರಿಯುತ್ತಿದ್ದ ಸಮಯದಲ್ಲಿ ರೈತರೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಾಡ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮಂಜುನಾಥ ಯಲ್ಲಪ್ಪ ಬೈರಿಯವರ (47) ಮೃತ ರೈತ.

ಇವರು ಜಮೀನಿನಲ್ಲಿ ಮೆಕ್ಕೆಜೋಳ ಮುರಿಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net