ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ, ಗ್ರೇಡ್ 2 ತಹಸೀಲ್ದಾರ್ ಪ್ರಭಾಕರ ಗೌಡಗೆ ರೈತ ಸಂಘ ಮನವಿ

170320 Hadagali Farmers Appela to Start Maize Purchase Center
Published on

ಹೂವಿನಹಡಗಲಿ: ತಾಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ತಾಲೂಕು ಹಸಿರು ಸೇನೆ ರೈತ ಸಂಘ ಸೋಮವಾರ ತಹಸೀಲ್ದಾರ್ ಹಾಗೂ ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿತು.

ತಾಲೂಕಿನಲ್ಲಿ ರೈತರು ಬೆಳೆದ ಮೆಕ್ಕೆಜೋಳ ಬೆಳೆಗೆ ಬೆಲೆ ಇಲ್ಲವಾಗಿದೆ. ಕರೊನಾ ವೈರಸ್ ಹಾಗೂ ಇತರೆ ಕಾರಣಗಳಿಂದ ಮೆಕ್ಕೆಜೋಳ ಬೆಲೆ ಸಂಪೂರ್ಣ ಕುಸಿತ ಕಂಡಿದೆ. ಈಗಾಗಲೇ ರೈತರು ಸಾಲ ಮಾಡಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭಿಸುವ ಮೂಲಕ ರೈತರ ನೆರವಿಗೆ ಬರಬೇಕು. ಇಲ್ಲದಿದ್ದರೆ ರೈತರೊಂದಿಗೆ ಹೋರಾಟ ನಡೆಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಸಿದರು. ಸಂಘದ ಜಿಲ್ಲಾ ಅಧ್ಯಕ್ಷ ವಿ.ಬಿ.ಸೋಮಶೇಖರಪ್ಪ, ತಾಲೂಕು ಅಧ್ಯಕ್ಷ ಅಂಚಿ ಮಂಜುನಾಥ, ಶಿವನಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net